1
|
ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ. |
2
|
ಜನರು ನನ್ನ ಸುತ್ತಲೂ ನಿಂತುಕೊಂಡು ನನ್ನನ್ನು ನೋಡಿ ನಗುತ್ತಿದ್ದಾರೆ. ಅವರು ನನ್ನ ಕಣ್ಣೆದುರಿನಲ್ಲೇ ಗೇಲಿ ಮಾಡುತ್ತಾ ಅವಮಾನ ಮಾಡುತ್ತಿದ್ದಾರೆ. |
3
|
“ದೇವರೇ, ಕೃಪೆ ತೋರಿ ನಾನು ನಿರಪರಾಧಿಯೆಂಬುದಕ್ಕೆ ನೀನೇ ನನಗೆ ಜಾಮೀನಾಗು. ನಾನು ನಿರಪರಾಧಿ ಎಂಬುದಕ್ಕೆ ಜಾಮೀನಾಗಲು ಯಾರೂ ಒಪ್ಪುತ್ತಿಲ್ಲ. |
4
|
ನೀನು ನನ್ನ ಸ್ನೇಹಿತರ ಮನಸ್ಸುಗಳನ್ನು ಮುಚ್ಚಿ ಬಿಟ್ಟಿರುವೆ; ಅವರು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರಿಗೆ ಜಯವಾಗದಂತೆ ನೋಡಿಕೋ. |
5
|
‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’ ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ. |
6
|
“ದೇವರು ನನ್ನ ಹೆಸರನ್ನು ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ. ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ. |
7
|
ನನ್ನ ಕಣ್ಣುಗಳು ಕುರುಡಾಗಿವೆ. ನಾನು ಬಹು ದುಃಖಿತನಾಗಿದ್ದೇನೆ; ಅತ್ಯಧಿಕವಾದ ನೋವಿನಲ್ಲಿದ್ದೇನೆ. ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ. |
8
|
ನೀತಿವಂತರು ಇದನ್ನು ಕಂಡು ಗಲಿಬಿಲಿಗೊಂಡಿದ್ದಾರೆ. ನಿರಪರಾಧಿಗಳು ದೇವದೂಷಕರ ವಿಷಯದಲ್ಲಿ ಗಲಿಬಿಲಿಗೊಂಡಿದ್ದಾರೆ. |
9
|
ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು. |
10
|
“ಆದರೆ ನೀವೆಲ್ಲರೂ ಬನ್ನಿರಿ, ನನ್ನ ತಪ್ಪನ್ನು ತೋರಿಸಿರಿ. ನಿಮ್ಮಲ್ಲಿ ಒಬ್ಬ ಜ್ಞಾನಿಯೂ ಇಲ್ಲ. |
11
|
ನನ್ನ ಜೀವಿತವು ಮುಗಿದುಹೋಗುತ್ತಿದೆ. ನನ್ನ ಯೋಜನೆಗಳು ನಾಶವಾಗಿವೆ; ನನ್ನ ನಿರೀಕ್ಷೆಯು ಇಲ್ಲವಾಗಿದೆ. |
12
|
ರಾತ್ರಿಯನ್ನು ಹಗಲನ್ನಾಗಿ ಪರಿವರ್ತಿಸುವ, ಬೆಳಕನ್ನು ಕತ್ತಲೆಯನ್ನಾಗಿ ಮಾಡುವ ನನ್ನ ನಿರೀಕ್ಷೆಗಳು ಇಲ್ಲವಾಗಿವೆ. |
13
|
“ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ, |
14
|
ನಾನು ಸಮಾಧಿಗೆ, ‘ನೀನೇ ನನ್ನ ತಂದೆ’ಯೆಂದೂ ಹುಳುವಿಗೆ ‘ನೀನೇ ನನ್ನ ತಾಯಿಯೂ ನನ್ನ ತಂಗಿಯೂ’ ಎಂದೂ ಹೇಳುವುದಾದರೆ, |
15
|
ನನಗೆ ನಿರೀಕ್ಷೆಯೇ ಇಲ್ಲ. ನನ್ನ ನಿರೀಕ್ಷೆಯನ್ನು ಯಾರೂ ನೋಡಲಾರರು. |
16
|
ನನ್ನ ನಿರೀಕ್ಷೆಯು ಮರಣದ ಸ್ಥಳಕ್ಕೆ ಇಳಿದು ಹೋಗುವುದೇ? ನಾವು ಒಟ್ಟಾಗಿ ಧೂಳಿಗೆ ಇಳಿದು ಹೋಗುತ್ತೇವೋ?” |
Job 17:10 Kannada Language Bible Words basic statistical display
COMING SOON ...