1
|
ಬಳಿಕ ಶೂಹ ದೇಶದ ಬಿಲ್ದದನು ಹೀಗೆ ಉತ್ತರಕೊಟ್ಟನು: |
2
|
“ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ. |
3
|
ನಮ್ಮನ್ನು ದಡ್ಡ ಪ್ರಾಣಿಗಳಂತೆ ಯೋಚಿಸಿಕೊಂಡಿರುವುದೇಕೆ? |
4
|
ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯಮಾಡಿಕೊಳ್ಳುತ್ತಿರುವೆ. ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? ಕೇವಲ ನಿನ್ನನ್ನು ತೃಪ್ತಿಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿಕೊಂಡಿರುವಿಯಾ? |
5
|
“ಹೌದು, ದುಷ್ಟನ ದೀಪವು ಆರಿಹೋಗುವುದು; ಅವನ ಬೆಂಕಿಯು ಉರಿಯುವುದಿಲ್ಲ. |
6
|
ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿ ಹೋಗುವುದು. |
7
|
ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; ಅವನ ದುಷ್ಟ ಯೋಜನೆಗಳೇ ಅವನನ್ನು ಬೀಳಿಸುತ್ತವೆ. |
8
|
ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು. |
9
|
ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು. ಉರುಲು ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು. |
10
|
ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ. |
11
|
ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ. |
12
|
ವಿಪತ್ತುಗಳು ಅವನಿಗಾಗಿ ಹಸಿವೆಯಿಂದ ಕಾದುಕೊಂಡಿವೆ. ಅವನು ಬೀಳುವಾಗ ನಾಶನವು ಅವನಿಗಾಗಿ ಸಿದ್ಧವಾಗಿರುತ್ತದೆ. |
13
|
ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳೆಸಿ ಬಿಡುತ್ತದೆ. |
14
|
ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು. |
15
|
ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ. |
16
|
ಅವನ ಬೇರುಗಳು ಕೆಳಗೆ ಒಣಗಿ ಹೋಗುತ್ತವೆ. ಅವನ ಕೊಂಬೆಗಳು ಮೇಲೆ ಸತ್ತುಹೋಗುತ್ತವೆ. |
17
|
ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ. |
18
|
ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು. |
19
|
ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲಿ ಸಂತತಿಯವರಾಗಲಿ ಇರುವುದಿಲ್ಲ. ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ. |
20
|
ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು. |
21
|
ಇಂದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.” |
Job 18:14 Kannada Language Bible Words basic statistical display
COMING SOON ...