2
|
“ನಾನಿನ್ನೂ ಸಂಕಟದಲ್ಲಿರುವುದರಿಂದ ಈ ಹೊತ್ತು ಸಹ ನಾನು ದೂರು ಹೇಳುವೆನು. |
3
|
ಆಹಾ, ದೇವರ ದರ್ಶನವು ನನಗೆ ಎಲ್ಲಿ ಆಗುವುದು? ಆತನ ಬಳಿಗೆ ನಾನು ಹೇಗೆ ಹೋಗಬೇಕು? ನನಗೆ ಗೊತ್ತಾಗಿದ್ದರೆ ಎಷ್ಟೋ ಮೇಲು! |
4
|
ಆಗ ನಾನು ದೇವರಿಗೆ ನನ್ನ ವ್ಯಾಜ್ಯದ ಬಗ್ಗೆ ವಿವರಿಸುತ್ತಿದ್ದೆನು; ನಾನು ನಿರಪರಾಧಿಯೆಂದು ನಿರೂಪಿಸಲು ನನ್ನ ಬಾಯನ್ನು ವಾದಗಳಿಂದ ತುಂಬಿಸಿಕೊಳ್ಳುತ್ತಿದ್ದೆನು. |
5
|
ದೇವರ ಪ್ರತ್ಯುತ್ತರವನ್ನು ನಾನು ಕೇಳಬಯಸುವೆ. ಆತನ ಉತ್ತರಗಳನ್ನು ಅರ್ಥಮಾಡಿಕೊಳ್ಳ ಬಯಸುವೆ. |
6
|
ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು! |
7
|
ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆ ಮಾಡುವನು. |
8
|
“ಆದರೆ, ನಾನು ಪೂರ್ವಕ್ಕೆ ಹೋದರೂ ದೇವರು ಅಲ್ಲಿಲ್ಲ. ನಾನು ಪಶ್ಚಿಮಕ್ಕೆ ಹೋದರೂ ದೇವರು ಅಲ್ಲಿಯೂ ನನಗೆ ಕಾಣುವುದಿಲ್ಲ. |
9
|
ದೇವರು ಉತ್ತರದಿಕ್ಕಿನಲ್ಲಿ ಕಾರ್ಯನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣ ದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ. |
10
|
ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು. |
11
|
ಆತನ ಮಾರ್ಗದಲ್ಲೇ ನಾನು ನಡೆದಿದ್ದೇನೆ. ನಾನು ಓರೆಯಾಗದೆ ಆತನ ಮಾರ್ಗವನ್ನೇ ಅನುಸರಿಸಿದ್ದೇನೆ. |
12
|
ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನಕ್ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ. |
13
|
“ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು. |
14
|
ದೇವರು ತನ್ನ ಆಲೋಚನೆಗೆ ತಕ್ಕಂತೆ ನನಗೆ ಮಾಡುವನು. ಆತನಲ್ಲಿ ಇಂಥಾ ಸಂಕಲ್ಪಗಳು ಎಷ್ಟೋ ಇವೆ. |
15
|
ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ. |
16
|
ನನ್ನ ಹೃದಯವನ್ನು ಕುಂದಿಸಿದವನೂ ದೇವರೇ. ನನ್ನನ್ನು ಭಯಭ್ರಾಂತನನ್ನಾಗಿ ಮಾಡಿದವನೂ ಸರ್ವಶಕ್ತನಾದ ದೇವರೇ. |
17
|
ಕಪ್ಪು ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು. |
Job 23:1 Kannada Language Bible Words basic statistical display
COMING SOON ...