1
|
ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು: |
2
|
“ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು. |
3
|
ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು. |
4
|
ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ. |
5
|
ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ. |
6
|
ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳುವಿನಂತಿದ್ದಾನೆ!” |
Job 25:1 Kannada Language Bible Words basic statistical display
COMING SOON ...