1
|
ಆಗ ಯೋಬನು ಹೀಗೆ ಉತ್ತರಕೊಟ್ಟನು: |
2
|
“ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ! |
3
|
ಹೌದು, ಅಜ್ಞಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ! ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ. |
4
|
ಇವುಗಳನ್ನು ತಿಳಿಸಲು ನಿನಗೆ ಯಾರು ಸಹಾಯ ಮಾಡಿದವರು? ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು? |
5
|
“ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ; |
6
|
ದೇವರಿಗೆ ಪಾತಾಳವೂ ಸ್ಪಷ್ಟವಾಗಿ ಕಾಣುತ್ತದೆ; ಮರಣವು ಆತನಿಗೆ ಮರೆಯಾಗಿಲ್ಲ. |
7
|
ದೇವರು ಶೂನ್ಯದ ಮೇಲೆ ಉತ್ತರದಿಕ್ಕಿನ ಆಕಾಶವನ್ನು ವಿಸ್ತರಿಸಿದನು. ಆತನು ಭೂಮಿಯನ್ನು ಯಾವ ಆಧಾರವೂ ಇಲ್ಲದೆ ತೂಗುಹಾಕಿದ್ದಾನೆ. |
8
|
ದೇವರು ಮೋಡಗಳನ್ನು ನೀರಿನಿಂದ ತುಂಬಿಸುವನು. ಆದರೆ ಮೋಡಗಳು ನೀರಿನ ಭಾರದಿಂದ ಒಡೆದುಹೋಗದಂತೆ ನೋಡಿಕೊಳ್ಳುವನು. |
9
|
ದೇವರು ತನ್ನ ಮೋಡಗಳನ್ನು ಹರಡಿ ಪೂರ್ಣಚಂದ್ರನನ್ನು ಮರೆಮಾಡುವನು. |
10
|
ದೇವರು ಸಮುದ್ರದ ಮೇಲೆ ಬೆಳಕು ಮತ್ತು ಕತ್ತಲೆಗಳು ಸಂಧಿಸುವ ಸ್ಥಳದಲ್ಲಿ ಕ್ಷಿತಿಜವನ್ನು ಗಡಿರೇಖೆಯನ್ನಾಗಿ ಎಳೆದಿದ್ದಾನೆ. |
11
|
ದೇವರು ಗದರಿಸುವಾಗ ಆಕಾಶಮಂಡಲದ ಸ್ತಂಭಗಳು ಭಯದಿಂದ ನಡುಗುತ್ತವೆ. |
12
|
ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು. ದೇವರ ಶಕ್ತಿಯು ರಹಬನ ಸಹಾಯಕರನ್ನು ನಾಶಮಾಡುವುದು. |
13
|
ಆತನ ಉಸಿರು ಆಕಾಶಮಂಡಲವನ್ನು ಶುಭ್ರಗೊಳಿಸುವುದು. ಆತನ ಜ್ಞಾನವು ಓಡಿಹೋಗಲು ಪ್ರಯತ್ನಿಸಿದ ರಹಬನನ್ನು ನಾಶಮಾಡುವುದು. |
14
|
ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?” |
Job 26:4 Kannada Language Bible Words basic statistical display
COMING SOON ...