1
|
ಯೋಬನು ಮಾತನ್ನು ಮುಂದುವರಿಸಿ ಇಂತೆಂದನು: |
2
|
“ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು. |
3
|
ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದೆನು. |
4
|
ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲವಾಗಿದ್ದವು; ಆ ದಿನಗಳಲ್ಲಿ ದೇವರ ಸ್ನೇಹವು ನನ್ನೊಂದಿಗೂ ನನ್ನ ಮನೆಯವರೊಂದಿಗೂ ಇತ್ತು. |
5
|
ಆ ದಿನಗಳಲ್ಲಿ ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು; ನನ್ನ ಮಕ್ಕಳು ನನ್ನ ಸುತ್ತಲೂ ಇದ್ದರು. |
6
|
ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು. |
7
|
“ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದೆನು. |
8
|
ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು. ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿ ಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು. |
9
|
ಮಾತಾಡುತ್ತಿದ್ದ ಜನನಾಯಕರು ತಮ್ಮ ಬಾಯಿ ಮೇಲೆ ಕೈಯಿಟ್ಟುಕೊಂಡು ಮೌನವಾಗುತ್ತಿದ್ದರು. |
10
|
ಪ್ರಮುಖನಾಯಕರುಗಳು ಸಹ ನಾಲಿಗೆಯು ಸಿಕ್ಕಿಕೊಂಡಂತೆ ತಮ್ಮ ಧ್ವನಿಯನ್ನು ಕಡಿಮೆ ಮಾಡುತ್ತಿದ್ದರು. |
11
|
ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು. |
12
|
ಯಾಕಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು. |
13
|
ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು. |
14
|
ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಡವಾಗಿಯೂ ಇತ್ತು. |
15
|
ನಾನು ಕುರುಡನಿಗೆ ಕಣ್ಣಾಗಿಯೂ ಕುಂಟನಿಗೆ ಕಾಲಾಗಿಯೂ ಇದ್ದೆನು. |
16
|
ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು. |
17
|
ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ಕಿತ್ತು ತರುತ್ತಿದ್ದೆನು. |
18
|
“ನನ್ನ ಬಗ್ಗೆ ಆಲೋಚಿಸುತ್ತಾ, ‘ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು. |
19
|
ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುತ್ತವೆ; ನನ್ನ ಕೊಂಬೆಗಳು ಇಬ್ಬನಿಯಿಂದ ಹಸಿಯಾಗಿರುತ್ತವೆ; |
20
|
ಜನರು ನನ್ನನ್ನು ಹೊಗಳುತ್ತಲೇ ಇರುವರು; ಕೈಯಲ್ಲಿ ಹೊಸಬಿಲ್ಲು ಇರುವಂತೆ ನಾನು ಬಲಿಷ್ಠನಾಗಿದ್ದೇನೆ’ ಎಂದುಕೊಂಡೆನು. |
21
|
“ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು. |
22
|
ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು. |
23
|
ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರು ನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು. |
24
|
ನಾನು ಅವರನ್ನು ಕಂಡು ಮುಗುಳ್ನಗೆ ಬೀರಿದಾಗ ಅವರಿಗೆ ನಂಬುವುದಕ್ಕೇ ಆಗುತ್ತಿರಲಿಲ್ಲ. ನನ್ನ ಸಂತೋಷದ ಮುಖವು ಅವರನ್ನು ಪ್ರೋತ್ಸಾಹಗೊಳಿಸಿತು. |
25
|
ನಾನು ನಾಯಕನಾಗಿದ್ದರೂ ಅವರೊಂದಿಗೇ ಇರುತ್ತಿದ್ದೆನು; ಪಾಳೆಯದಲ್ಲಿ ಸೈನ್ಯಗಳೊಂದಿಗಿರುವ ರಾಜನಂತೆ ನಾನು ದುಃಖಿತರನ್ನು ಆದರಿಸುತ್ತಿದ್ದೆನು. |
Job 29:1 Kannada Language Bible Words basic statistical display
COMING SOON ...