1
|
ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿ ಬಿಟ್ಟಿದ್ದೆನು. |
2
|
ಆ ಯೌವನಸ್ಥರ ತಂದೆಗಳಿಗೆ ನನ್ನಲ್ಲಿ ಕೆಲಸ ಮಾಡುವಷ್ಟು ಬಲವಿರಲಿಲ್ಲ. ಅವರು ಮುದುಕರಾಗಿದ್ದರು; ತ್ರಾಣವಿಲ್ಲದವರಾಗಿದ್ದರು. |
3
|
ಆ ಮನುಷ್ಯರು ಬಡಕಲಾಗಿದ್ದರು; ತಿನ್ನಲಿಕ್ಕಿಲ್ಲದೆ ಹಸಿವೆಯಿಂದಿದ್ದರು; ಅಡವಿಯ ಒಣಧೂಳನ್ನು ತಿನ್ನುತ್ತಿದ್ದರು. |
4
|
ಅವರು ಮರುಭೂಮಿಯಲ್ಲಿ ಉಪ್ಪುಸಸಿಗಳನ್ನು ಕೀಳುತ್ತಿದ್ದರು; ಕುರುಚಲು ಮರದ ಬೇರುಗಳನ್ನು ತಿನ್ನುತ್ತಿದ್ದರು. |
5
|
ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು. |
6
|
ಆ ಮುದುಕರು ನದಿಯ ದಂಡೆಗಳಲ್ಲಿಯೂ ನೆಲದ ಕುಳಿಗಳಲ್ಲಿಯೂ ಗುಹೆಗಳಲ್ಲಿಯೂ ವಾಸಿಸುತ್ತಿದ್ದರು. |
7
|
ಅವರು ಪೊದೆಗಳಲ್ಲಿ ಕಾಡುಕತ್ತೆಗಳಂತೆ ಅರಚುತ್ತಿದ್ದರು; ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು. |
8
|
ಅಯೋಗ್ಯರಾಗಿದ್ದ ಈ ಗುಂಪಿನವರು ದೇಶ ಭ್ರಷ್ಟರಾಗಿದ್ದರು. |
9
|
“ಈಗಲಾದರೋ ಅವರ ಗಂಡುಮಕ್ಕಳು ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು; ನನ್ನ ಹೆಸರು ಅವರಿಗೆ ಹಾಸ್ಯವಾಯಿತು. |
10
|
ಆ ಯೌವನಸ್ಥರು ನನ್ನನ್ನು ಕಂಡು ಅಸಹ್ಯ ಪಡುತ್ತಾರೆ; ನನ್ನಿಂದ ದೂರನಿಲ್ಲುತ್ತಾರೆ. ನನ್ನ ಮುಖದ ಮೇಲೆ ಉಗುಳುವುದಕ್ಕೂ ಅವರು ಹಿಂದೆಗೆಯರು! |
11
|
ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಆ ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ. |
12
|
ಅವರು ನನ್ನ ಬಲಗಡೆಯಲ್ಲಿ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕಿ ನನ್ನನ್ನು ನಾಶಮಾಡಲು ದಿಬ್ಬಹಾಕಿದ್ದಾರೆ. |
13
|
ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ. |
14
|
ಅವರು ಗೋಡೆಯನ್ನು ಒಡೆದು ನುಗ್ಗಿ ಬರಲು ಕಲ್ಲುಗಳು ನನ್ನ ಮೇಲೆ ಬೀಳುವವು. |
15
|
ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆ ಹೋಗುವುದು. |
16
|
“ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ. |
17
|
ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ. |
18
|
ದೇವರು ನನ್ನ ಮೇಲಂಗಿಯ ಕೊರಳಪಟ್ಟಿಯನ್ನು ಹಿಡಿದು ನನ್ನ ಬಟ್ಟೆಯನ್ನು ತಿರುವಿಬಿಟ್ಟಿದ್ದಾನೆ. |
19
|
ದೇವರು ನನ್ನನ್ನು ಮಣ್ಣಿಗೆ ಎಸೆದುಬಿಟ್ಟಿದ್ದಾನೆ, ನಾನು ಧೂಳಿನಂತೆಯೂ ಬೂದಿಯಂತೆಯೂ ಆಗಿದ್ದೇನೆ. |
20
|
“ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ. ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನಕೊಡುವುದಿಲ್ಲ. |
21
|
ದೇವರೇ, ನೀನು ನನ್ನ ಪಾಲಿಗೆ ಕ್ರೂರನಾಗಿಬಿಟ್ಟೆ. ನಿನ್ನ ಶಕ್ತಿಯಿಂದ ನನ್ನನ್ನು ನೋಯಿಸುತ್ತಿರುವೆ. |
22
|
ದೇವರೆ, ನನ್ನನ್ನು ಎತ್ತಿಕೊಂಡು ಹೋಗಲು ನೀನು ಬಿರುಗಾಳಿಗೆ ಅವಕಾಶಕೊಟ್ಟೆ; ನೀನು ನನ್ನನ್ನು ಎತ್ತಿ ಬಿರುಗಾಳಿಗೆ ಎಸೆದುಬಿಟ್ಟೆ. |
23
|
ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು. |
24
|
“ಆದರೆ ಈಗಾಗಲೇ ನಾಶವಾಗಿ ಸಹಾಯಕ್ಕಾಗಿ ಕೂಗಿಕೊಳ್ಳುವವನಿಗೆ ಯಾರೂ ಕೇಡು ಮಾಡುವುದಿಲ್ಲ. |
25
|
ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ. |
26
|
ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರು ನೋಡುತ್ತಿದ್ದಾಗ ನನಗೆ ಕತ್ತಲಾಯಿತು. |
27
|
ನನ್ನ ಅಂತರಂಗವು ಕುದಿಯುತ್ತಿದೆ; ಸಂಕಟವು ನಿಲ್ಲುತ್ತಲೇ ಇಲ್ಲ. ಸಂಕಟವು ಈಗ ತಾನೆ ಆರಂಭಗೊಂಡಿದೆ. |
28
|
ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ. ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ. |
29
|
ನಾನು ನರಿಗಳಂತೆಯೂ ಉಷ್ಟ್ರಪಕ್ಷಿಗಳಂತೆಯೂ ಒಬ್ಬಂಟಿಗನಾಗಿರುವೆ. |
30
|
ನನ್ನ ಚರ್ಮವು ಕಡುಕಪ್ಪಾಗಿದೆ. ನನ್ನ ದೇಹವು ಜ್ವರದಿಂದ ಬಿಸಿಯಾಗಿದೆ. |
31
|
ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ. |
Job 30:1 Kannada Language Bible Words basic statistical display
COMING SOON ...