1
|
ಎಲೀಹು ತನ್ನ ಮಾತನ್ನು ಮುಂದುವರಿಸಿದನು: |
2
|
“ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ. ಜಾಣರೇ, ನನಗೆ ಗಮನಕೊಡಿರಿ. |
3
|
ಕಿವಿಯು ಮಾತುಗಳನ್ನು ವಿವೇಚಿಸುತ್ತದೆ; ನಾಲಿಗೆಯು ಆಹಾರವನ್ನು ರುಚಿನೋಡುತ್ತದೆ. |
4
|
ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ. |
5
|
ಯೋಬನು ಹೇಳುವುದೇನಂದರೆ, ‘ನಾನು ನಿರಪರಾಧಿ. ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ. |
6
|
ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’ |
7
|
“ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿದಂತೆ ದೇವರನ್ನು ದೂಷಿಸುತ್ತಾನೆ. |
8
|
ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು; ಕೆಟ್ಟವರ ಸಂಗಡ ನಡೆದಾಡುವನು. |
9
|
ಯಾಕಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ. |
10
|
“ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ. |
11
|
ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು. |
12
|
ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ. |
13
|
ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು? ಎಲೀಹುವಿನ ವಾದ |
14
|
ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ, |
15
|
ಆಗ ಭೂಮಿಯ ಮೇಲಿರುವ ಎಲ್ಲಾ ಜನರು ಸತ್ತುಹೋಗಿ ಧೂಳಾಗುವರು. |
16
|
ನೀನು ವಿವೇಕಿಯಾಗಿದ್ದರೆ, ನನ್ನ ಮಾತುಗಳಿಗೆ ಕಿವಿಗೊಡು. |
17
|
ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ? |
18
|
‘ನೀವು ಅಯೋಗ್ಯರು!’ ಎಂದು ರಾಜರುಗಳಿಗೆ ಹೇಳುವವನು ದೇವರೊಬ್ಬನೇ. ‘ನೀವು ಕೆಡುಕರು!’ ಎಂದು ನಾಯಕರುಗಳಿಗೆ ಹೇಳುವವನು ದೇವರೇ. |
19
|
ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ. |
20
|
ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು. |
21
|
“ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ. ಅವನ ಪ್ರತಿಯೊಂದು ಹೆಜ್ಜೆ ಆತನಿಗೆ ಗೊತ್ತಿದೆ. |
22
|
ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ. |
23
|
ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತು ಪಡಿಸಬೇಕಿಲ್ಲ; ನ್ಯಾಯತೀರ್ಪು ನೀಡಲು ಅವರನ್ನು ತನ್ನ ಮುಂದೆ ಕರೆಸಬೇಕಿಲ್ಲ. |
24
|
ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು. |
25
|
ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು. |
26
|
ದೇವರು ದುಷ್ಟರನ್ನು ಅವರು ದುಷ್ಕೃತ್ಯಗಳ ನಿಮಿತ್ತ ಬಹಿರಂಗವಾಗಿ ದಂಡಿಸುವನು. |
27
|
ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. |
28
|
ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು. ಆತನು ದಿಕ್ಕಿಲ್ಲದವರ ಕೂಗನ್ನು ಕೇಳಿದನು. |
29
|
ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ. |
30
|
ದೈವಹೀನನಾದ ರಾಜನು ಜನರನ್ನು ನಾಶನಕ್ಕೆ ನಡೆಸುವುದಾದರೆ ದೇವರು ಅವನನ್ನು ಪದಚ್ಯುತಿಗೊಳಿಸುವನು. |
31
|
ಮನುಷ್ಯನು ದೇವರಿಗೆ, ‘ನಾನು ದೋಷಿ, ನಾನು ಇನ್ನೆಂದಿಗೂ ಪಾಪ ಮಾಡುವುದಿಲ್ಲ. |
32
|
ದೇವರೇ, ನೀನು ನನಗೆ ಆಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು. |
33
|
“ಯೋಬನೇ, ನೀನು ಮಾರ್ಪಾಟಾಗದೆ ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. ನಿನ್ನ ಆಲೋಚನೆಯನ್ನು ನನಗೆ ತಿಳಿಸು. |
34
|
“ಜ್ಞಾನಿಗಳೂ ಬುದ್ಧಿವಂತರೂ ನನ್ನ ಮಾತುಗಳಿಗೆ ಕಿವಿಗೊಟ್ಟು, |
35
|
‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!” |
36
|
ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು. ಯಾಕೆಂದರೆ ಅವನು ದುಷ್ಟನಂತೆ ಉತ್ತರಿಸುತ್ತಿದ್ದಾನೆ. |
37
|
ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ.” ಎಂದು ನನಗೆ ಹೇಳುವರು. |
Job 34:37 Kannada Language Bible Words basic statistical display
COMING SOON ...