1
|
ಎಲೀಹು ಮಾತನ್ನು ಮುಂದುವರಿಸಿ, |
2
|
“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ. |
3
|
ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು. |
4
|
“ಯೋಬನೇ, ನಾನು ನಿನಗೂ ನಿನ್ನೊಂದಿಗಿರುವ ಸ್ನೇಹಿತರಿಗೂ ಉತ್ತರಕೊಡುವೆ. |
5
|
ಕಣ್ಣೆತ್ತಿ ಆಕಾಶವನ್ನು ನೋಡು. ಮೋಡಗಳನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ. |
6
|
ಯೋಬನೇ, ನೀನು ಪಾಪಮಾಡಿದರೆ, ಅದರಿಂದ ದೇವರಿಗೇನೂ ಕೇಡಾಗುವುದಿಲ್ಲ. ನೀನು ಅನೇಕ ಪಾಪಗಳನ್ನು ಮಾಡಿದ್ದರೂ ಅದರಿಂದ ದೇವರಿಗೇನೂ ಆಗುವುದಿಲ್ಲ. |
7
|
ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ. |
8
|
ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು. |
9
|
“ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು. |
10
|
ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ. |
11
|
ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ. |
12
|
“ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ. |
13
|
ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ. |
14
|
ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು. |
15
|
“ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ. |
16
|
ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.” |
Job 35:12 Kannada Language Bible Words basic statistical display
COMING SOON ...