1
|
“ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ. |
2
|
ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ. |
3
|
ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು. |
4
|
ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು! |
5
|
ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ. |
6
|
ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು. |
7
|
ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿ ಹಾಕುತ್ತಾನೆ. |
8
|
ಪ್ರಾಣಿಗಳು ಓಡಿಹೋಗಿ ತಮ್ಮ ಗುಹೆಗಳಲ್ಲಿ ಸೇರಿಕೊಳ್ಳುತ್ತವೆ. |
9
|
ದಕ್ಷಿಣ ದಿಕ್ಕಿನಿಂದ ಬಿರುಗಾಳಿಯೂ ಉತ್ತರ ದಿಕ್ಕಿನಿಂದ ಚಳಿಗಾಳಿಯೂ ಬರುತ್ತವೆ. |
10
|
ದೇವರ ಉಸಿರು ನೀರನ್ನು ಮಂಜನ್ನಾಗಿ ಮಾಡಿ ಸಾಗರಗಳನ್ನು ಹೆಪ್ಪುಗಟ್ಟಿಸುವುದು. |
11
|
ದೇವರು ಮೋಡಗಳಲ್ಲಿ ನೀರು ತುಂಬಿಸುವನು. ಆತನು ತನ್ನ ಮಿಂಚನ್ನು ಮೋಡಗಳಲ್ಲೆಲ್ಲಾ ಹರಡುವನು. |
12
|
ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ. |
13
|
ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು. |
14
|
“ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು. |
15
|
ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ? |
16
|
ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ. |
17
|
ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ. |
18
|
ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ? |
19
|
“ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೊ ನಮಗೆ ತಿಳಿಯದು. |
20
|
ನಾನು ದೇವರಿಗೆ, ‘ನಿನ್ನೊಂದಿಗೆ ಮಾತಾಡಬೇಕಾಗಿದೆ’ ಎಂದು ಹೇಳಲಾರೆ. ಯಾಕೆಂದರೆ ಅದು ನಾಶನವನ್ನೇ ಕೇಳಿಕೊಂಡಂತಾಗುವುದು. |
21
|
ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದ ಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು. |
22
|
ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ. |
23
|
“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ. ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ. |
24
|
ಆದಕಾರಣವೇ ಜನರು ದೇವರಲ್ಲಿ ಭಯಭಕ್ತಿಯಿಂದಿರುವರು. ದೇವರಾದರೋ ತಮ್ಮನ್ನು ಜ್ಞಾನಿಗಳೆಂದು ಭಾವಿಸಿಕೊಂಡಿರುವ ಗರ್ವಿಷ್ಠರನ್ನು ಗೌರವಿಸುವುದಿಲ್ಲ.” |
Job 37:5 Kannada Language Bible Words basic statistical display
COMING SOON ...