English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Job Chapters

Job 40 Verses

1 ಇದಲ್ಲದೆ ಯೆಹೋವನು ಯೋಬನಿಗೆ,
2 “ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.
3 ಆಗ ಯೋಬನು ಯೆಹೋವನಿಗೆ,
4 “ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.
5 ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಅಂದನು.
6 ಆಗ ಯೆಹೋವನು ಬಿರುಗಾಳಿಯೊಳಗಿಂದ ಮತ್ತೆ ಯೋಬನೊಂದಿಗೆ ಮಾತಾಡಿ ಹೀಗೆಂದನು:
7 “ಯೋಬನೇ, ನಡುಕಟ್ಟಿಕೊಂಡು ಎದ್ದುನಿಂತುಕೊ! ನಾನು ನಿನಗೆ ಕೆಲವು ಪ್ರಶ್ನೆಗಳನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
8 “ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?
9 ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?
10 ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೊ.
11 ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು.
12 ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.
13 ಗರ್ವಿಷ್ಠರನ್ನೆಲ್ಲಾ ಧೂಳಿನಲ್ಲಿ ಸಮಾಧಿಮಾಡು; ಅವರ ದೇಹಗಳನ್ನು ಸುತ್ತಿ ಅವರ ಸಮಾಧಿಗಳೊಳಗೆ ಹಾಕು.
14 ಯೋಬನೇ, ನೀನು ಇವುಗಳನ್ನೆಲ್ಲಾ ಮಾಡಶಕ್ತನಾಗಿದ್ದರೆ, ನಿನ್ನನ್ನು ರಕ್ಷಿಸಿಕೊಳ್ಳಬಲ್ಲೆ ಎಂದು ನಿನ್ನನ್ನು ನಾನೇ ಹೊಗಳುವೆನು.
15 “ಯೋಬನೇ, ಬೆಹೇಮೋತನ್ನು ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ.
16 ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸಖಂಡಗಳು ಬಹು ಶಕ್ತಿಯುತವಾಗಿವೆ.
17 ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸಖಂಡಗಳು ಬಹು ಬಲವಾಗಿವೆ.
18 ಅದರ ಎಲುಬುಗಳು ತಾಮ್ರದಂತೆ ಬಲವಾಗಿವೆ. ಅದರ ಕಾಲುಗಳು ಕಬ್ಬಿಣದ ಕಂಬಿಗಳಂತಿವೆ.
19 ನನ್ನಿಂದ ನಿರ್ಮಿತವಾಗಿರುವ ಅತ್ಯದ್ಭುತವಾದ ಪ್ರಾಣಿ ಅದು. ಅದನ್ನು ಸೃಷ್ಟಿಸಿದ ನಾನೊಬ್ಬನೇ ಅದನ್ನು ಕೊಲ್ಲಬಲ್ಲೆನು.
20 ಕಾಡುಪ್ರಾಣಿಗಳು ಆಟವಾಡುವ ಬೆಟ್ಟಗಳ ಮೇಲೆ ಬೆಳೆಯುವ ಹುಲ್ಲನ್ನು ಅದು ತಿನ್ನುತ್ತದೆ.
21 ಅದು ತಾವರೆ ಗಿಡಗಳ ಕೆಳಗೆ ಮಲಗಿಕೊಳ್ಳುತ್ತದೆ; ಕೊಳಚೆಯಲ್ಲಿರುವ ಅವುಗಳ ನಡುವೆ ಅಡಗಿಕೊಳ್ಳುತ್ತದೆ.
22 ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ.
23 ನದಿಯು ತುಂಬಿಹರಿದರೂ ಅದು ಓಡಿಹೋಗುವುದಿಲ್ಲ. ಜೋರ್ಡನ್ ನದಿಯು ಅದರ ಮುಖಕ್ಕೆ ರಭಸದಿಂದ ಬಡಿದರೂ ಅದಕ್ಕೆ ಭಯವಿಲ್ಲ.
24 ಅದರ ಕಣ್ಣುಗಳನ್ನು ಕುರುಡುಮಾಡಿ ಅದನ್ನು ಬಂಧಿಸುವುದಕ್ಕಾಗಲಿ ಕೊಂಡಿಗಳಿಂದ ಅದರ ಮೂಗಿಗೆ ಚುಚ್ಚುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
×

Alert

×