1
|
ಇದಲ್ಲದೆ ಯೆಹೋವನು ಯೋಬನಿಗೆ, |
2
|
“ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು. |
4
|
“ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ. |
5
|
ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಎಂದನು. |
6
|
ಆಗ ಯೆಹೋವನು ಬಿರುಗಾಳಿಯೊಳಗಿಂದ ಮತ್ತೆ ಯೋಬನೊಂದಿಗೆ ಮಾತಾಡಿ ಇಂತೆಂದನು: |
7
|
“ಯೋಬನೇ, ನಡುಕಟ್ಟಿಕೊಂಡು ಎದ್ದುನಿಂತುಕೋ? ನಾನು ನಿನಗೆ ಕೆಲವು ಪ್ರಶ್ನೆಗಳನ್ನು ಕೇಳುವೆನು; ನೀನು ನನಗೆ ಉತ್ತರಕೊಡು. |
8
|
“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ? |
9
|
ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ? |
10
|
ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೋ. |
11
|
ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು. |
12
|
ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು. |
13
|
ಗರ್ವಿಷ್ಠರನ್ನೆಲ್ಲಾ ಧೂಳಿನಲ್ಲಿ ಸಮಾಧಿಮಾಡು; ಅವರ ದೇಹಗಳನ್ನು ಸುತ್ತಿ ಅವರ ಸಮಾಧಿಗಳೊಳಗೆ ಹಾಕು. |
14
|
ಯೋಬನೇ, ನೀನು ಇವುಗಳನ್ನೆಲ್ಲಾ ಮಾಡಶಕ್ತನಾಗಿದ್ದರೆ, ನಿನ್ನನ್ನು ರಕ್ಷಿಸಿಕೊಳ್ಳಬಲ್ಲೆ ಎಂದು ನಿನ್ನನ್ನು ನಾನೇ ಹೊಗಳುವೆನು. |
15
|
“ಯೋಬನೇ, ಬೆಹೇಮೋತನ್ನು ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ. |
16
|
ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸಖಂಡಗಳು ಬಹು ಶಕ್ತಿಯುತವಾಗಿವೆ. |
17
|
ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸಖಂಡಗಳು ಬಹು ಬಲವಾಗಿವೆ. |
18
|
ಅದರ ಎಲುಬುಗಳು ತಾಮ್ರದಂತೆ ಬಲವಾಗಿವೆ. ಅದರ ಕಾಲುಗಳು ಕಬ್ಬಿಣದ ಕಂಬಿಗಳಂತಿವೆ. |
19
|
ನನ್ನಿಂದ ನಿರ್ಮಿತವಾಗಿರುವ ಅತ್ಯದ್ಭುತವಾದ ಪ್ರಾಣಿ ಅದು. ಅದನ್ನು ಸೃಷ್ಟಿಸಿದ ನಾನೊಬ್ಬನೇ ಅದನ್ನು ಕೊಲ್ಲಬಲ್ಲೆನು. |
20
|
ಕಾಡುಪ್ರಾಣಿಗಳು ಆಟವಾಡುವ ಬೆಟ್ಟಗಳ ಮೇಲೆ ಬೆಳೆಯುವ ಹುಲ್ಲನ್ನು ಅದು ತಿನ್ನುತ್ತದೆ. |
21
|
ಅದು ತಾವರೆ ಗಿಡಗಳ ಕೆಳಗೆ ಮಲಗಿಕೊಳ್ಳುತ್ತದೆ; ಕೊಳಚೆಯಲ್ಲಿರುವ ಅವುಗಳ ನಡುವೆ ಅಡಗಿಕೊಳ್ಳುತ್ತದೆ. |
22
|
ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ. |
23
|
ನದಿಯು ತುಂಬಿಹರಿದರೂ ಅದು ಓಡಿಹೋಗುವುದಿಲ್ಲ. ಜೋರ್ಡನ್ ನದಿಯು ಅದರ ಮುಖಕ್ಕೆ ರಭಸದಿಂದ ಬಡಿದರೂ ಅದಕ್ಕೆ ಭಯವಿಲ್ಲ. |
24
|
ಅದರ ಕಣ್ಣುಗಳನ್ನು ಕುರುಡುಮಾಡಿ ಅದನ್ನು ಬಂಧಿಸುವುದಕ್ಕಾಗಲಿ ಕೊಂಡಿಗಳಿಂದ ಅದರ ಮೂಗಿಗೆ ಚುಚ್ಚುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ. |
Job 40:1 Kannada Language Bible Words basic statistical display
COMING SOON ...