1
|
“ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು. |
2
|
ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದುದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು. |
3
|
ನನ್ನ ಜನರಿಗಾಗಿ ಚೀಟು ಹಾಕಿದರು. ಒಬ್ಬ ಹುಡುಗನನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು. ಅವರು ದ್ರಾಕ್ಷಾರಸವನ್ನು ಕುಡಿಯುವದಕ್ಕಾಗಿ ಹುಡುಗಿಯನ್ನು ಮಾರಿದರು. |
4
|
“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು. |
5
|
ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ. |
6
|
“ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ. |
7
|
ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು. |
8
|
ನಿಮ್ಮ ಗಂಡು ಹೆಣ್ಣುಮಕ್ಕಳನ್ನು ನಾನು ಯೆಹೂದದ ಜನರಿಗೆ ಮಾರುವೆನು. ಅವರು ಅವರನ್ನು ಬಹುದೂರದಲ್ಲಿ ಶೆಬದ ಜನರಿಗೆ ಮಾರಿಬಿಡುವರು.” ಇದು ಯೆಹೋವನ ನುಡಿ. |
9
|
[This verse may not be a part of this translation] |
10
|
ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ. ನಿಮ್ಮ ಬಲಹೀನನಾದ ಸೈನಿಕನು, “ನಾನು ಬಲಶಾಲಿ” ಅನ್ನಲಿ. |
11
|
ಎಲ್ಲಾ ಜನಾಂಗದವರೇ, ತ್ವರೆಪಡಿರಿ. ಆ ಸ್ಥಳದಲ್ಲಿ ಒಟ್ಟು ಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು. |
12
|
ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು. |
13
|
ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪೀಪಾಯಿಗಳು ತುಂಬಿ ತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ! |
14
|
ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ. |
15
|
ಸೂರ್ಯ ಚಂದ್ರರು ಕತ್ತಲಾಗುವರು, ನಕ್ಷತ್ರಗಳು ಹೊಳೆಯುವುದಿಲ್ಲ. |
16
|
ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು. |
17
|
ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿ ಹೋಗುವುದಿಲ್ಲ.” |
18
|
“ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಶಿಯ ಕಣಿವೆಗೆ ನೀರನ್ನು ಕೊಡುವದು. |
19
|
ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು. |
20
|
ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು. |
21
|
ಆ ಜನರು ನನ್ನ ಜನರನ್ನು ಕೊಂದರು. ಆದುದರಿಂದ ನಾನು ನಿಜವಾಗಿಯೂ ಅವರನ್ನು ಶಿಕ್ಷಿಸುವೆನು.” ಯಾಕೆಂದರೆ ದೇವರಾದ ಯೆಹೋವನು ಚೀಯೋನಿನಲ್ಲಿ ವಾಸಿಸುವನು. |
Joel 3:2 Kannada Language Bible Words basic statistical display
COMING SOON ...