ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.
ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.
(14-15) “ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.
ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.
ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.
ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಅದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಆ ಅದ್ಭುತಕಾರ್ಯಗಳು ತೋರಿಸುತ್ತವೆ.
ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.
ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.
ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.
ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.