ನೀವು ನನ್ನನ್ನು ನಿಜವಾಗಿಯೂ ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದುಕೊಳ್ಳುತ್ತಿದ್ದಿರಿ. ಆದರೆ ಈಗ ನೀವು ತಂದೆಯನ್ನು ತಿಳಿದಿದ್ದೀರಿ. ನೀವು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?
ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.
“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.
ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.
ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.
ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.
“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.
‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.