1
|
”ಜನರು ನಿಮ್ಮ ನಂಬಿಕೆಯನ್ನು ನಾಶಮಾಡಲಾಗದಂತೆ ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ. |
2
|
ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ. |
3
|
ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು. |
4
|
ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು. |
5
|
ಈಗಲಾದರೊ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ನೀನು ಎಲ್ಲಿಗೆ ಹೋಗುತ್ತಿರುವೆ?؆ ಎಂದು ನನ್ನನ್ನು ಕೇಳಲಿಲ್ಲ. |
6
|
ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ. |
7
|
ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. |
8
|
ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿ ಕೊಡುವನು. |
9
|
ನನ್ನನ್ನು ನಂಬದಿರುವುದರಿಂದ ಜನರಲ್ಲಿ ಪಾಪ ವಿದೆಯೆಂದು ಆ ಸಹಾಯಕನು ನಿರೂಪಿಸುವನು. |
10
|
ನಾನು ತಂದೆಯ ಬಳಿಗೆ ಹೋಗುವುದರಿಂದ ನೀತಿಯ ವಿಷಯವಾಗಿಯೂ ಆತನು ಜನರಿಗೆ ನಿರೂಪಿಸುವನು. ಇನ್ನು ಮೇಲೆ ನೀವು ನನ್ನನ್ನು ನೋಡುವುದಿಲ್ಲ. |
11
|
ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯ ತೀರ್ಪಾಗಿದೆ. |
12
|
”ನಾನು ನಿಮಗೆ ತಿಳಿಸಬೇಕಾದ ಇನ್ನೂ ಅನೇಕ ಸಂಗತಿಗಳಿವೆ. ಆದರೆ ಈಗ ಆ ಸಂಗತಿಗಳನ್ನು ಸ್ವೀಕರಿಸಿಕೊಳ್ಳಲು ನಿಮಗೆ ಬಹು ಕಷ್ಟವಾಗಬಹುದು. |
13
|
ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ. |
14
|
ಸತ್ಯದ ಆತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು ನಿಮಗೆ ತಿಳಿಸುವುದರ ಮೂಲಕ ನನ್ನನ್ನು ಮಹಿಮೆಪಡಿಸುವನು. |
15
|
ನನ್ನ ತಂದೆಗೆ ಇರುವುದೆಲ್ಲಾ ನನ್ನವೇ. ಆದಕಾರಣ, ಪವಿತ್ರಾತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು, ನಿಮಗೆ ತಿಳಿಸುತ್ತಾನೆ ಎಂದು ನಾನು ಹೇಳಿದೆನು. |
16
|
”ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.” |
17
|
ಶಿಷ್ಯರಲ್ಲಿ ಕೆಲವರು, ”ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ؆ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. |
18
|
ಶಿಷ್ಯರು, ”ಸ್ವಲ್ಪಕಾಲ؆ ಎಂದರೇನು? ಆತನ ಮಾತೇ ನಮಗೆ ಅರ್ಥವಾಗುತ್ತಿಲ್ಲ” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. |
19
|
ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ؆ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ? |
20
|
ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು. |
21
|
ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತಬಿಡುತ್ತಾಳೆ. |
22
|
ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು. |
23
|
ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು. |
24
|
ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು. |
25
|
”ನಾನು ನಿಮಗೆ ಈ ಸಂಗತಿಗಳನ್ನು ಸಾಮ್ಯಗಳ ರೂಪದಲ್ಲಿ ತಿಳಿಸಿದೆನು. ಆದರೆ ಸಮಯವು ಬರಲಿದೆ. ಆಗ ನಾನು ಸಾಮ್ಯಗಳನ್ನು ಬಳಸದೆ ನನ್ನ ತಂದೆಯ ಬಗ್ಗೆ ಸರಳವಾದ ಮಾತುಗಳಲ್ಲಿ ತಿಳಿಸುವೆನು. |
26
|
ಆಗ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಬೇಡಿಕೊಳ್ಳುವಿರಿ. ನಾನು ನಿಮಗೋಸ್ಕರ ತಂದೆಯನ್ನು ಕೇಳಿಕೊಳ್ಳುವ ಅಗತ್ಯವಿರುವುದಿಲ್ಲ. |
27
|
ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ. |
28
|
ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು. |
29
|
ಆಗ ಶಿಷ್ಯರು ಯೇಸುವಿಗೆ, “ಈಗ ನೀನು ನಮ್ಮೊಂದಿಗೆ ಸ್ಪಷ್ಟವಾಗಿ ಮಾತಾಡುತ್ತಿರುವೆ. ಅರ್ಥವಾಗದಂಥ ಕಠಿಣ ಮಾತುಗಳನ್ನು ನೀನು ಬಳಸುತ್ತಿಲ್ಲ. |
30
|
ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು. |
31
|
ಯೇಸು, “ಹಾಗಾದರೆ ಈಗ ನೀವು ನಂಬುತ್ತೀರಾ? |
32
|
ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ. |
33
|
”ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು. |
John 16:1 Kannada Language Bible Words basic statistical display
COMING SOON ...