1
|
ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು. |
2
|
ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ. |
3
|
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ. |
4
|
ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು. |
5
|
ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು. |
6
|
”ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ, ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು. |
7
|
”ನೀನು ನನಗೆ ಕೊಟ್ಟ ಪ್ರತಿಯೊಂದೂ ನಿನ್ನಿಂದಲೇ ಬಂದಿದೆ ಎಂಬುದು ಇವರಿಗೆ ಈಗ ತಿಳಿದಿದೆ. |
8
|
ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ. |
9
|
ಈಗ ನಾನು ಇವರಿಗಾಗಿ ಪ್ರಾರ್ಥಿಸಿವೆನು. ಈ ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ. |
10
|
”ನನ್ನಲ್ಲಿರುವುದೆಲ್ಲಾ ನಿನ್ನದೇ ಮತ್ತು ನಿನ್ನಲ್ಲಿರುವುದೆಲ್ಲಾ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ. |
11
|
ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು. |
12
|
ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು. |
13
|
”ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. |
14
|
ನಾನು ಇವರಿಗೆ ನಿನ್ನ ವಾಕ್ಯಗಳನ್ನು ಕೊಟ್ಟಿದ್ದೇನೆ. ಈ ಲೋಕವು ಇವರನ್ನು ದ್ವೇಷಿಸುತ್ತದೆ. ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ. ಆದ್ದರಿಂದ ಈ ಲೋಕವು ಇವರನ್ನು ದ್ವೇಷಿಸಿದೆ. |
15
|
ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ. |
16
|
ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ. |
17
|
”ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು. |
18
|
ನೀನು ನನ್ನನ್ನು ಈ ಲೋಕಕ್ಕೆ ಕಳುಹಿಸಿದಂತೆ ನಾನೂ ಇವರನ್ನು ಈ ಲೋಕಕ್ಕೆ ಕಳುಹಿಸಿದ್ದೇನೆ. |
19
|
ಇವರು ನಿಜವಾಗಿ ನಿನ್ನ ಸೇವೆಗೆ ಪ್ರತಿಷ್ಠಿತರಾಗಬೇಕೆಂದು ನಾನು ನನ್ನನ್ನೇ ಪ್ರತಿಷ್ಠಿಸಿಕೊಂಡಿದ್ದೇನೆ. |
20
|
”ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ. |
21
|
ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವಿಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. |
22
|
ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು. |
23
|
”ನಾನು ಅವರಲ್ಲಿ ಇರುವೆನು, ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು. |
24
|
”ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ. |
25
|
ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ, ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ. |
26
|
ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.” |
John 17:23 Kannada Language Bible Words basic statistical display
COMING SOON ...