1
|
ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು. |
2
|
ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು. |
3
|
ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು. |
4
|
ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು. |
5
|
ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು. |
6
|
ದೇಹವು ಮಾನುಷ್ಯ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು. |
7
|
ನೀನು ಹೊಸದಾಗಿ ಹುಟ್ಟಲೇಬೇಕು؆ ಎಂದು ನಾನು ಹೇಳಿದ್ದಕ್ಕೆ ಆಶ್ಚರ್ಯಪಡಬೇಡ. |
8
|
ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು. |
9
|
ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು. |
10
|
ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ? |
11
|
ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ. |
12
|
ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ! |
13
|
ಪರಲೋಕದಿಂದ ಇಳಿದು ಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ. |
14
|
”ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು. |
15
|
ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಹೊಂದಿಕೊಳ್ಳುವರು” ಎಂದು ಹೇಳಿದನು. |
16
|
ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು. ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ದೇವರು ತನ್ನ ಮಗನನ್ನು ಕೊಟ್ಟನು. |
17
|
ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು. |
18
|
ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ. |
19
|
ಆ ತೀರ್ಪು ಏನಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಟಕಾರ್ಯಗಳನ್ನು ಮಾಡುತ್ತಿದ್ದರು. |
20
|
ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ. |
21
|
ಆದರೆ ಸತ್ಯಮಾರ್ಗವನ್ನು ಅನುಸರಿಸುವವನು ಬೆಳಕಿಗೆ ಬರುತ್ತಾನೆ. ಅವನು ಮಾಡಿರುವ ಕಾರ್ಯಗಳೆಲ್ಲಾ ದೇವರ ಮೂಲಕವಾಗಿ ಮಾಡಿದ ಕಾರ್ಯಗಳೆಂದು ಬೆಳಕು ತೋರಿಸುತ್ತದೆ. |
22
|
ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು. |
23
|
ಯೋಹಾನನು ಸಹ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಐನೋನ್ ಎಂಬ ಊರು ಸಲೀಮ್ ಊರಿನ ಸಮೀಪದಲ್ಲಿದೆ. ಅಲ್ಲಿ ಬೇಕಾದಷ್ಟು ನೀರಿದ್ದುದರಿಂದ ಯೋಹಾನನು ಅಲ್ಲಿ ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಜನರು ಅಲ್ಲಿಗೆ ಬಂದು ದೀಕ್ಷಾಸ್ನಾನ ತೆಗೆದುಕೊಳ್ಳುತ್ತಿದ್ದರು. |
24
|
(ಆಗ ಯೋಹಾನನನ್ನು ಇನ್ನೂ ಸೆರೆಮನೆಗೆ ಹಾಕಿರಲಿಲ್ಲ.) |
25
|
ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು. |
26
|
ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು. |
27
|
ಯೋಹಾನನು, “ದೇವರು ಏನು ಕೊಡುತ್ತಾನೊ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು. |
28
|
ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ؆ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. |
29
|
ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ. |
30
|
ಆತನು (ಯೇಸು) ವೃದ್ಧಿಯಾಗಬೇಕು ಮತ್ತು ನಾನು ಕಡಿಮೆಯಾಗಬೇಕು. |
31
|
”ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. |
32
|
ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ. |
33
|
ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ. |
34
|
ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ. |
35
|
ತಂದೆಯು ಮಗನನ್ನು ಪ್ರೀತಿಸುತ್ತಾನೆ. ತಂದೆಯು ಮಗನಿಗೆ ಪ್ರತಿಯೊಂದರ ಮೇಲೆಯೂ ಅಧಿಕಾರವನ್ನು ಕೊಟ್ಟಿದ್ದಾನೆ. |
36
|
ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು. |
John 3:21 Kannada Language Bible Words basic statistical display
COMING SOON ...