ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)
ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.
ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು.
ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.
ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.
ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.
‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.
ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.
ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.
ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.
ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.
ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.
ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.
ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.