1
|
ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು. |
2
|
(ವಾಸ್ತವವಾಗಿ ಜನರಿಗೆ ದೀಕ್ಷಾಸ್ನಾನ ಕೊಟ್ಟದ್ದು ಯೇಸುವಲ್ಲ. ಆತನ ಶಿಷ್ಯರೇ ಜನರಿಗೆ ದೀಕ್ಷಾಸ್ನಾನ ಮಾಡಿಸಿದರು.) |
3
|
ಆಗ, ಆತನು ಜುದೇಯವನ್ನು ಬಿಟ್ಟು ಮತ್ತೆ ಗಲಿಲಾಯಕ್ಕೆ ಹೋದನು. |
4
|
ಸಮಾರ್ಯ ಪ್ರಾಂತ್ಯದ ಮೂಲಕವೇ ಗಲಿಲಾಯಕ್ಕೆ ಹೋಗಬೇಕಿತ್ತು. |
5
|
ಯೇಸು ಸಮಾರ್ಯದ ಪಟ್ಟಣವಾದ ಸಿಖಾರ್ ಎಂಬಲ್ಲಿಗೆ ಬಂದನು. ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿ ಆ ಊರಿದೆ. |
6
|
ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು. |
7
|
ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು. |
8
|
(ಯೇಸುವಿನ ಶಿಷ್ಯರು ಆಹಾರ ಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.) |
9
|
ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೊ ಯೆಹೂದ್ಯನು. ನಾನಾದರೊ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.) |
10
|
ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು. |
11
|
ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ. |
12
|
ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು. |
13
|
ಯೇಸು, “ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೂ ಮತ್ತೆ ದಾಹವಾಗುವುದು. |
14
|
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು. |
15
|
ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು. |
16
|
ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು. |
17
|
ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು. ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. |
18
|
ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು. |
19
|
ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ. |
20
|
ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು. |
21
|
ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ. |
22
|
ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ. |
23
|
ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ. |
24
|
ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು. |
25
|
ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”) |
26
|
ಆಗ ಯೇಸು, “ಆತನೇ ಈಗ ನಿನ್ನೊಂದಿಗೆ ಮಾತಾಡುತ್ತಿದ್ದಾನೆ. ನಾನೇ ಮೆಸ್ಸೀಯ” ಎಂದು ಹೇಳಿದನು. |
27
|
ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನುಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ. |
28
|
ಬಳಿಕ ಆ ಸ್ತ್ರೀಯು, ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ಹಿಂತಿರುಗಿ ಹೋಗಿ ಜನರಿಗೆ, |
29
|
”ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು. |
30
|
ಆದ್ದರಿಂದ ಜನರು ಆತನನ್ನು ನೋಡಲು ಪಟ್ಟಣದಿಂದ ಹೊರಬಂದರು. |
31
|
ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು. |
32
|
ಅದಕ್ಕೆ ಯೇಸು, “ನನ್ನಲ್ಲಿ ಆಹಾರವಿದೆ. ಆ ಆಹಾರದ ಬಗ್ಗೆ ನಿಮಗೇನೂ ಗೊತ್ತಿಲ್ಲ” ಎಂದನು. |
33
|
ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು. |
34
|
ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ. |
35
|
ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು؆ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ. |
36
|
ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು. |
37
|
ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ؆ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು. |
38
|
ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು. |
39
|
ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು. |
40
|
ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು. |
41
|
ಆತನು ಹೇಳಿದ ಸಂಗತಿಗಳನ್ನು ಕೇಳಿ ಇನ್ನೂ ಅನೇಕ ಜನರು ನಂಬಿದರು. |
42
|
ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು. |
43
|
ಎರಡು ದಿನಗಳಾದ ನಂತರ ಯೇಸು ಅಲ್ಲಿಂದ ಗಲಿಲಾಯಕ್ಕೆ ಹೋದನು. |
44
|
(ಪ್ರವಾದಿಗೆ ಸ್ವಂತ ಊರಿನಲ್ಲಿ ಗೌರವವಿಲ್ಲವೆಂದು ಸ್ವತಃ ಯೇಸುವೇ ತಿಳಿಸಿದ್ದನು.) |
45
|
ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು. |
46
|
ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು. |
47
|
ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು. |
48
|
ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು. |
49
|
ರಾಜನ ಅಧಿಕಾರಿ, “ಸ್ವಾಮೀ, ನನ್ನ ಮಗನು ಸಾಯುವ ಮೊದಲೇ ನೀನು ಬರಬೇಕು” ಎಂದು ಕೇಳಿಕೊಂಡನು. |
50
|
ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು” ಎಂದು ಉತ್ತರಕೊಟ್ಟನು. ಯೇಸುವಿನ ಮಾತನ್ನು ಅವನು ನಂಬಿ ಮನೆಗೆ ಹಿಂತಿರುಗಿದನು. |
51
|
ಅವನು ಮನೆಗೆ ಹೋಗುತ್ತಿರುವಾಗ ಅವನ ಸೇವಕರುಗಳು ಬಂದು ಅವನನ್ನು ಭೇಟಿಯಾಗಿ, “ನಿನ್ನ ಮಗನು ಗುಣಹೊಂದಿದನು” ಎಂದು ತಿಳಿಸಿದರು. |
52
|
ಅವನು, “ನನ್ನ ಮಗನಿಗೆ ಯಾವಾಗ ಗುಣವಾಯಿತು?” ಎಂದು ಕೇಳಿದನು. ಸೇವಕರುಗಳು, “ನಿನ್ನೆ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಅವನ ಜ್ವರವು ಬಿಟ್ಟಿತು” ಎಂದು ಉತ್ತರಕೊಟ್ಟರು. |
53
|
”ನಿನ್ನ ಮಗನು ಬದುಕುವನು” ಎಂದು ಯೇಸು ಹೇಳಿದ್ದು ಇದೇ ಹೊತ್ತಿನಲ್ಲಿ ಎಂಬುದು ತಂದೆಗೆ ತಿಳಿದಿತ್ತು. ಆದ್ದರಿಂದ ಅವನು ಮತ್ತು ಅವನ ಮನೆಯವರೆಲ್ಲ ಯೇಸುವನ್ನು ನಂಬಿದರು. |
54
|
ಯೇಸು ಜುದೇಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯವಿದು. |
John 4:43 Kannada Language Bible Words basic statistical display
COMING SOON ...