1
|
ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು. |
2
|
ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ ಬೆತ್ಸಥ؆ ಎಂದು ಕರೆಯುತ್ತಾರೆ. ಈ ಕೊಳವು ಕುರಿಬಾಗಿಲು؆ ಎಂಬ ಸ್ಥಳದ ಸಮೀಪದಲ್ಲಿದೆ. |
3
|
ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು. |
4
|
[This verse may not be a part of this translation] |
5
|
[This verse may not be a part of this translation] |
6
|
ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು. |
7
|
ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು. |
8
|
ಆಗ ಯೇಸು, “ಎದ್ದುನಿಲ್ಲು! ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ” ಎಂದು ಹೇಳಿದನು. |
9
|
ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್ದಿನದಲ್ಲಿ. |
10
|
ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್ದಿನ. ನೀನು ಸಬ್ಬತ್ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು. |
11
|
ಅದಕ್ಕೆ ಅವನು, “ನನ್ನನ್ನು ಗುಣಪಡಿಸಿದವನೇ, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ؆ ಎಂದು ಹೇಳಿದನು” ಎಂಬುದಾಗಿ ಉತ್ತರಿಸಿದನು. |
12
|
ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು. |
13
|
ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟು ಹೋದನು. |
14
|
ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು. |
15
|
ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು. |
16
|
ಯೇಸು ಈ ಕಾರ್ಯಗಳನ್ನು ಸಬ್ಬತ್ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು. |
17
|
ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು. |
18
|
ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು. |
19
|
ಅದಕ್ಕೆ ಉತ್ತರವಾಗಿ ಆತನು ಇಂತೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ. |
20
|
ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ. |
21
|
ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ. |
22
|
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ. |
23
|
ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ. |
24
|
”ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ. |
25
|
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು. |
26
|
ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು, |
27
|
ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ. |
28
|
ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ. |
29
|
ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು. |
30
|
”ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪುಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ. |
31
|
”ನನ್ನ ವಿಷಯವಾಗಿ ನಾನೇ ಹೇಳಿಕೊಂಡರೆ, ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. |
32
|
ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ. |
33
|
”ನೀವು ಯೋಹಾನನ ಬಳಿಗೆ ಜನರನ್ನು ಕಳುಹಿಸಿದ್ದಿರಿ. ಅವನು ನಿಮಗೆ ಸತ್ಯದ ಬಗ್ಗೆ ತಿಳಿಸಿದನು. |
34
|
ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. |
35
|
ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು, ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ. |
36
|
”ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿ ಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ. |
37
|
ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ. |
38
|
ತಂದೆಯ ಉಪದೇಶವು ನಿಮ್ಮಲ್ಲಿ ನೆಲೆಸಿಲ್ಲ. ಏಕೆಂದರೆ ತಂದೆಯು ಕಳುಹಿಸಿರುವಾತನನ್ನು ನೀವು ನಂಬುವುದಿಲ್ಲ. |
39
|
”ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ! |
40
|
ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ. |
41
|
”ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ. |
42
|
ಆದರೆ ನಾನು ನಿಮ್ಮನ್ನು ಬಲ್ಲೆನು. ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನನಗೆ ಗೊತ್ತಿದೆ. |
43
|
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ. |
44
|
ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ? |
45
|
ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು. |
46
|
ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ. |
47
|
ಆದರೆ ಮೋಶೆ ಬರೆದದ್ದನ್ನು ನೀವು ನಂಬುವುದಿಲ್ಲ. ಹೀಗಿರಲು ನಾನು ಹೇಳುವ ಸಂಗತಿಗಳನ್ನು ನೀವು ಹೇಗೆ ನಂಬಬಲ್ಲಿರಿ?” |
John 5:36 Kannada Language Bible Words basic statistical display
COMING SOON ...