Bible Languages

Indian Language Bible Word Collections

Bible Versions

Books

Jonah Chapters

Jonah 2 Verses

Bible Versions

Books

Jonah Chapters

Jonah 2 Verses

1 ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಇಂತೆಂದನು:
2 “ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದಿ.
3 “ನೀನು ನನ್ನನ್ನು ಸಮುದ್ರಕ್ಕೆ ಎಸೆದಿ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು. ನಾನು ಕೆಳಗೆ, ಕೆಳಗೆ ಆಳವಾದ ಸ್ಥಳಕ್ಕೆ ಹೋದೆನು. ನನ್ನ ಸುತ್ತಲೂ ಸಮುದ್ರ, ನೀರು ತುಂಬಿದ್ದವು.
4 ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.
5 “ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟವು. ನೀರು ನನ್ನ ಬಾಯಿಯನ್ನು ಮುಚ್ಚಿತು. ಆಗ ನನಗೆ ಉಸಿರಾಡಲಾಗಲಿಲ್ಲ. ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು.
6 ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.
7 “ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದಿ.
8 ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.
9 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರ ಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಹೊರುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”
10 ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿ ಬಿಟ್ಟಿತು.

Jonah 2:1 Kannada Language Bible Words basic statistical display

COMING SOON ...

×

Alert

×