Bible Languages

Indian Language Bible Word Collections

Bible Versions

Books

Joshua Chapters

Joshua 20 Verses

Bible Versions

Books

Joshua Chapters

Joshua 20 Verses

1 ತರುವಾಯ ಯೆಹೋವನು ಯೆಹೋಶುವನಿಗೆ,
2 “ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯನಗರಗಳನ್ನಾಗಿ ಗೊತ್ತುಪಡಿಸು.
3 ನಿಮ್ಮಲ್ಲಿ ಒಬ್ಬನು ತಿಳಿಯದೆ ಅಕಸ್ಮಿಕವಾಗಿ ನರಹತ್ಯ ಮಾಡಿದರೆ ಅವನು ಯಾವುದಾದರೊಂದು ಆಶ್ರಯನಗರಕ್ಕೆ ಹೋಗಿ ಅಡಗಿಕೊಳ್ಳಲಿ.
4 “ಆಶ್ರಯನಗರಕ್ಕೆ ಓಡಿಹೋದವನು ಆ ಪಟ್ಟಣದ ಪ್ರವೇಶದ್ವಾರದಲ್ಲಿ ನಿಂತು ಅಲ್ಲಿಯ ಜನನಾಯಕರಿಗೆ ನಡೆದ ಸಂಗತಿಯನ್ನು ತಿಳಿಸಲಿ. ಆಗ ನಾಯಕರು ಅವನಿಗೆ ನಗರವನ್ನು ಪ್ರವೇಶಿಸಲು ಅನುಮತಿ ಕೊಡಲಿ; ತಮ್ಮ ಜೊತೆಯಲ್ಲಿ ವಾಸಿಸಲು ಒಂದು ಸ್ಥಳವನ್ನು ಕೊಡಲಿ.
5 ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ಆ ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕಂದರೆ ಆ ನರಹತ್ಯವು ಆಕಸ್ಮಿಕವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ.
6 ಆ ನಗರದ ನ್ಯಾಯಾಸ್ಥಾನದಲ್ಲಿ ನ್ಯಾಯನಿರ್ಣಯವಾಗುವವರೆಗೂ ಮತ್ತು ಮಹಾಯಾಜಕನು ಜೀವದಿಂದ ಇರುವವರೆಗೂ ಅವನು ಅಲ್ಲಿಯೇ ಇರಬೇಕು. ತರುವಾಯ ಅವನು ತಾನು ಬಿಟ್ಟುಬಂದ ಊರಿನ ತನ್ನ ಮನೆಗೆ ಹೋಗಬಹುದು” ಎಂದು ಹೇಳಿದನು.
7 ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.
8 ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.
9 ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.

Joshua 20:1 Kannada Language Bible Words basic statistical display

COMING SOON ...

×

Alert

×