1
|
ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು. |
2
|
ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು. |
3
|
ಇಸ್ರೇಲರು ಯೆಹೋವನ ಈ ಆಜ್ಞೆಯನ್ನು ಪಾಲಿಸಿದರು. ಅವರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಅವುಗಳ ಸುತ್ತಮುತ್ತಲಿನ ಭೂಮಿಯನ್ನು ಕೊಟ್ಟರು: |
4
|
ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು. |
5
|
ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು. |
6
|
ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು. |
7
|
ಮೆರಾರೀ ಗೋತ್ರದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಈ ಹನ್ನೆರಡು ಪಟ್ಟಣಗಳು ರೂಬೇನ್, ಗಾದ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು. |
8
|
ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು. |
9
|
ಯೆಹೂದ ಮತ್ತು ಸಿಮೆಯೋನ್ ಕುಲದವರ ಪ್ರದೇಶಗಳಲ್ಲಿ ಬರುವ ಪಟ್ಟಣಗಳ ಹೆಸರುಗಳು ಇಂತಿವೆ: |
10
|
ಪಟ್ಟಣಗಳನ್ನು ಆರಿಸಿಕೊಳ್ಳುವ ಮೊದಲ ಅಧಿಕಾರವನ್ನು ಕೆಹಾತ್ಯ ಗೋತ್ರದ ಲೇವಿಯರಿಗೆ ಕೊಡಲಾಯಿತು. |
11
|
ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು. |
12
|
ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು. |
13
|
ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ, |
16
|
ಆಯಿನ್, ಯುಟ್ಟಾ ಮತ್ತು ಬೇತ್ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು. |
17
|
ಬೆನ್ಯಾಮೀನ್ ಕುಲದವರಿಗೆ ಸೇರಿದ ನಗರಗಳನ್ನು ಸಹ ಆರೋನನ ಸಂತತಿಯವರಿಗೆ ಕೊಡಲಾಯಿತು. ಅವು ಯಾವುವೆಂದರೆ: ಗಿಬ್ಯೋನ್, ಗೆಬ, |
18
|
ಅನಾತೋತ್ ಮತ್ತು ಅಲ್ಮೋನ್. ಈ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನೂ ಅವರಿಗೆ ಕೊಡಲಾಯಿತು. |
19
|
ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು. |
20
|
ಕೆಹಾತ್ಯರ ಕುಟುಂಬಕ್ಕೆ ಸೇರಿದ ಇತರ ಜನರಿಗೆ ಎಫ್ರಾಯೀಮ್ ಕುಲದವರ ಪ್ರದೇಶದಿಂದ ಕೆಲವು ಪಟ್ಟಣಗಳನ್ನು ಕೊಡಲಾಯಿತು. ಅವರು ಪಡೆದ ಪಟ್ಟಣಗಳು ಇವು: |
21
|
ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್, |
22
|
ಕಿಬ್ಚೈಮ್ ಮತ್ತು ಬೇತ್ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು. |
23
|
ದಾನ್ ಕುಲದವರು ಅವರಿಗೆ ಎಲ್ತೆಕೇ, ಗಿಬ್ಬೆತೋನ್, |
24
|
ಅಯ್ಯಾಲೋನ್ ಮತ್ತು ಗತ್ರಿಮ್ಮೋನ್ ಎಂಬ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
25
|
ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
26
|
ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪಭೂಮಿಯನ್ನು ಪಡೆದರು. |
27
|
ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
28
|
ಇಸ್ಸಾಕಾರ್ ಕುಲದವರು ಕಿಷ್ಯೋನ್, ದಾಬೆರತ್, |
29
|
ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
30
|
ಆಶೇರ್ ಕುಲದವರು ಮಿಷಾಲ್, ಅಬ್ದೋನ್, |
31
|
ಹೆಲ್ಕಾತ್, ರೆಹೋಬ್ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
32
|
ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
33
|
ಒಟ್ಟಿನಲ್ಲಿ ಗೇರ್ಷೋನ್ಯರಿಗೆ ಹದಿಮೂರು ಪಟ್ಟಣಗಳು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯು ಸಿಕ್ಕಿತು. |
34
|
ಲೇವಿಯರ ಮತ್ತೊಂದು ಗೋತ್ರವು ಮೆರಾರೀ ಎಂಬುದು. ಆ ಗೋತ್ರಕ್ಕೆ ದೊರೆತ ಪಟ್ಟಣಗಳು ಇಂತಿವೆ: ಜೆಬುಲೂನ್ ಕುಲದವರು ಅವರಿಗೆ ಚೂಕ್ನೀಮ್, ಕರ್ತಾ, |
35
|
ದಿಮ್ನಾ, ನಹಲಾಲ್ಗಳನ್ನು ಕೊಟ್ಟರು. ಒಟ್ಟಿನಲ್ಲಿ ಜೆಬುಲೂನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
36
|
ರೂಬೇನ್ಯರು ಅವರಿಗೆ ಬೆಚೆರ್, ಯಹಚಾ, |
37
|
ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
38
|
ಗಾದ್ಯರು ಅವರಿಗೆ ಗಿಲ್ಯಾದಿನ ಆಶ್ರಯನಗರವಾದ ರಾಮೋತ್, ಮಹನಯೀಮ್, |
39
|
ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. |
40
|
ಲೇವಿಯರ ಕೊನೆಯ ಗೋತ್ರದವರಾದ ಮೆರಾರೀಯರು ಒಟ್ಟಿನಲ್ಲಿ ಹನ್ನೆರಡು ಪಟ್ಟಣಗಳನ್ನು ಪಡೆದುಕೊಂಡರು. |
41
|
ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು. |
42
|
ಪ್ರತಿಯೊಂದು ಪಟ್ಟಣದಲ್ಲಿ ಪಶುಗಳಿಗಾಗಿ ಸ್ವಲ್ಪ ಭೂಮಿ ಇತ್ತು. ಇದು ಪ್ರತಿಯೊಂದು ಪಟ್ಟಣಕ್ಕೂ ಅನ್ವಯಿಸುತ್ತಿತ್ತು. |
43
|
ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು. |
44
|
ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. |
45
|
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು. |
Joshua 21:1 Kannada Language Bible Words basic statistical display
COMING SOON ...