ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.
ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. [*ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು ಇದು ಈ ಜನರು ಪ್ರಮುಖನಾಯಕರು ಎಂಬುದನ್ನು ತೋರಿಸುತ್ತದೆ. ಗಿಲ್ಯಾದಿನಲ್ಲಿ ಮೂವತ್ತು ಪಟ್ಟಣಗಳ ಮಹಾಪೌರರಾಗಿದ್ದಿರಬಹುದು.] ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.
ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.
ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.
ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು.
ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದ್ದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.
ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು.