ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವುಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.
ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.
ಪಕ್ಕದ ಕೋಣೆಯಲ್ಲಿ ಕೆಲವು ಜನ ಅಡಗಿಕೊಂಡಿದ್ದರು. ಆಗ ದೆಲೀಲಳು ಸಂಸೋನನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಹೇಳಿದಳು. ಆದರೆ ಸಂಸೋನನು ಸುಲಭವಾಗಿ ಆ ಬಿಲ್ಲಿನ ತಂತಿಗಳನ್ನು ಕಿತ್ತುಹಾಕಿದನು; ಸುಟ್ಟದಾರದಿಂದ ಬೂದಿ ಉದುರಿ ಬೀಳುವಂತೆ ಆ ತಂತಿಗಳು ಕಿತ್ತುಬಿದ್ದವು. ಹೀಗಾಗಿ ಫಿಲಿಷ್ಟಿಯರಿಗೆ ಸಂಸೋನನ ಬಲದ ರಹಸ್ಯ ತಿಳಿಯಲಿಲ್ಲ.
ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು. ದೆಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು.
ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಪುನಃ ಸುಳ್ಳು ಹೇಳಿದೆ. ನೀನು ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವುದು ಹೇಗೆಂಬುದನ್ನು ಈಗ ನನಗೆ ತಿಳಿಸು” ಎಂದು ಕೇಳಿದಳು. ಸಂಸೋನನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ದುರ್ಬಲನಾಗುತ್ತೇನೆ” ಎಂದು ಹೇಳಿದನು.
ಸಂಸೋನನು ಮಲಗಿಕೊಂಡಿರುವಾಗ ದೆಲೀಲಳು ಅವನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದಳು. ಆಮೇಲೆ ಆ ಮಗ್ಗವನ್ನು ಒಂದು ಗೂಟದಿಂದ ಭದ್ರಪಡಿಸಿದಳು. ಬಳಿಕ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಮತ್ತೆ ಕೂಗಿಕೊಂಡಳು. ಸಂಸೋನನು ಗೂಟವನ್ನೂ ಮಗ್ಗವನ್ನೂ ಲಾಳಿಯನ್ನೂ ಕಿತ್ತುಹಾಕಿದನು.
ಆಗ ದೆಲೀಲಳು ಸಂಸೋನನಿಗೆ, “ ‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ನೀನು ಹೇಗೆ ಹೇಳಲು ಸಾಧ್ಯ? ನನ್ನನ್ನು ನೀನು ನಂಬುವುದೇ ಇಲ್ಲ. ನೀನು ನನಗೆ ನಿನ್ನ ರಹಸ್ಯವನ್ನು ತಿಳಿಸುವುದಿಲ್ಲ. ಮೂರನೆಯ ಸಲ ನೀನು ನನ್ನನ್ನು ವಂಚಿಸಿದೆ. ನೀನು ನನಗೆ ನಿನ್ನ ಶಕ್ತಿಯ ರಹಸ್ಯವನ್ನು ತಿಳಿಸಲಿಲ್ಲ” ಎಂದಳು.
ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.
ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.
ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆಮಾಡಿದನು. ಆಗ ಅವಳು ಸಂಸೋನನ ಏಳುಜಡೆಗಳನ್ನು ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಆ ಏಳು ಜಡೆಗಳನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು.
ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.
ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.
ಫಿಲಿಷ್ಟಿಯ ಅಧಿಪತಿಗಳು ಒಂದು ಉತ್ಸವವನ್ನು ಮಾಡಲು ಸೇರಿಬಂದಿದ್ದರು. ಅವರು ತಮ್ಮ ದೇವರಾದ ದಾಗೋನನಿಗೆ ಒಂದು ಮಹಾಯಜ್ಞವನ್ನು ಸಮರ್ಪಿಸಬೇಕೆಂದಿದ್ದರು. “ನಮ್ಮ ಶತ್ರುವಾದ ಸಂಸೋನನನ್ನು ಸೋಲಿಸಲು ನಮ್ಮ ದೇವರು ನಮಗೆ ಸಹಾಯ ಮಾಡಿದನು” ಎಂದು ಅವರು ಭಾವಿಸಿದ್ದರು.
ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು, “ಇವನು ನಮ್ಮ ಜನರನ್ನು ಹಾಳುಮಾಡಿದನು. ಇವನು ನಮ್ಮ ಅನೇಕ ಜನರನ್ನು ಕೊಂದನು. ಆದರೆ ನಮ್ಮ ದೇವರು ನಮ್ಮ ಶತ್ರುವನ್ನು ಸೆರೆಹಿಡಿಯಲು ಸಹಾಯ ಮಾಡಿದನು” ಎಂದು ಹಾಡಿದರು.
ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.
ಒಬ್ಬ ಸೇವಕನು ಸಂಸೋನನ ಕೈಯನ್ನು ಹಿಡಿದುಕೊಂಡಿದ್ದನು. “ಈ ಮಂದಿರಕ್ಕೆ ಆಧಾರವಾಗಿರುವ ಕಂಬಗಳ ಹತ್ತಿರ ನನ್ನನ್ನು ಕರೆದುಕೊಂಡು ಹೋಗು. ನಾನು ಅವುಗಳಿಗೆ ಒರಗಿಕೊಳ್ಳುತ್ತೇನೆ” ಎಂದು ಸಂಸೋನನು ಅವನನ್ನು ಕೇಳಿಕೊಂಡನು.
ಆ ಮಂದಿರದಲ್ಲಿ ಗಂಡಸರು ಹೆಂಗಸರು ಕಿಕ್ಕಿರಿದು ನೆರೆದಿದ್ದರು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಹೆಂಗಸರು ಮತ್ತು ಗಂಡಸರು ಇದ್ದರು. ಅವರು ನಕ್ಕು ಸಂಸೋನನನ್ನು ಅಪಹಾಸ್ಯ ಮಾಡುತ್ತಿದ್ದರು.
ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು.
“ಈ ಫಿಲಿಷ್ಟಿಯರ ಜೊತೆ ನಾನೂ ಸಾಯಲು ಸಿದ್ಧ” ಎಂದು ಹೇಳಿ ಆ ಎರಡೂ ಕಂಬಗಳನ್ನು ತನ್ನ ಎಲ್ಲಾ ಶಕ್ತಿಯಿಂದ ಎಳೆಯುತ್ತಾ ಬಾಗಿದನು. ಆಗ ಮಂದಿರವು ಅಧಿಪತಿಗಳ ಮೇಲೂ ಅಲ್ಲಿದ್ದ ಜನರೆಲ್ಲರ ಮೇಲೂ ಕುಸಿದು ಬಿತ್ತು. ಈ ಪ್ರಕಾರ ಸಂಸೋನನು ತಾನು ಜೀವದಿಂದಿದ್ದಾಗ ಕೊಂದ ಜನರಿಗಿಂತ ಹೆಚ್ಚು ಜನರನ್ನು ತಾನು ಸಾಯುವಾಗ ಕೊಂದನು.
ಸಂಸೋನನ ಸಹೋದರರು ಮತ್ತು ಅವನ ತಂದೆಯ ಕುಟುಂಬದವರೆಲ್ಲರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಅವನ ತಂದೆಯ ಹೆಸರು ಮಾನೋಹ. ಆ ಸಮಾಧಿಯು ಚೊರ್ಗಕ್ಕೂ ಮತ್ತು ಎಷ್ಟಾವೋಲಿಗೂ ಮಧ್ಯದಲ್ಲಿದೆ. ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.