Bible Languages

Indian Language Bible Word Collections

Bible Versions

Books

Judges Chapters

Judges 5 Verses

Bible Versions

Books

Judges Chapters

Judges 5 Verses

1 ಇಸ್ರೇಲರು ಸೀಸೆರನನ್ನು ಸೋಲಿಸಿದ ದಿನ ದೆಬೋರಳು ಮತ್ತು ಅಬೀನೋವಮನ ಮಗನಾದ ಬಾರಾಕನು ಈ ಗೀತೆಯನ್ನು ಹಾಡಿದರು:
2 ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!
3 ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು; ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.
4 ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.
5 ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು.
6 ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು6 ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.
7 ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.
8 ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.
9 “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.
10 ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!
11 ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.
12 ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೋ!
13 ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.
14 ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.
15 ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗೆಯಿಂದ ಕಣಿವೆಗೆ ಬಂದರು. ರೂಬೇನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ.
16 ಹೀಗಿರಲು ನೀನು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.
17 “ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು.7 ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿ ಉಳಿದರು; ಅವರು ಸುರಕ್ಷಿತವಾದ ರೇವುಗಳಲ್ಲಿ ಬೀಡುಬಿಟ್ಟರು.
18 ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು.
19 ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!
20 ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು. ನಕ್ಷತ್ರಗಳು ಆಕಾಶಪಥದಿಂದ ಸೀಸೆರನೊಡನೆ ಯುದ್ಧ ಮಾಡಿದವು.
21 ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!
22 ಸೀಸೆರನ ಬಲಿಷ್ಠವಾದ ಕುದುರೆಗಳು ಭರದಿಂದ ಓಡಿದವು. ಆ ಕುದುರೆಗಳ ಕಾಲುಗಳು ನೆಲಕ್ಕೆ ಅಪ್ಪಳಿಸಿದವು.
23 “ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.
24 ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು.
25 ಸೀಸೆರನು ನೀರು ಕೇಳಿದನು; ಯಾಯೇಲಳು ಅವನಿಗೆ ಹಾಲು ಕೊಟ್ಟಳು. ಅರಸನಿಗೆ ಯೋಗ್ಯವಾದ ಬಟ್ಟಲಲ್ಲಿ ಅವಳು ಅವನಿಗೆ ಕೆನೆಯನ್ನು ತಂದಳು.
26 ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದು ಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
27 ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿ ಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದು ಬಿದ್ದನು. ಸೀಸೆರನು ಕುಸಿದು ಬಿದ್ದಲ್ಲಿಯೇ ಸತ್ತನು.
28 ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು.
29 ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು. ಹೌದು, ಸೇವಕಿಯು ಉತ್ತರಿಸಿದಳು,
30 ‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’
31 ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ! ನಲವತ್ತು ವರುಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.

Judges 5:1 Kannada Language Bible Words basic statistical display

COMING SOON ...

×

Alert

×