ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
၆ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.
ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.
ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”
ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ.
ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.