English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Leviticus Chapters

Leviticus 13 Verses

1 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:
2 “ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.
3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.
4 “ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು.
6 ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.
7 “ಆದರೆ ಆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು.
8 ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
9 “ಒಬ್ಬನಿಗೆ ಕುಷ್ಠವಿದ್ದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
10 ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ,
11 ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.
12 “ಕೆಲವು ಬಾರಿ ಚರ್ಮರೋಗವು ಒಬ್ಬನ ಮೈಯೆಲ್ಲಾ ಹರಡಿಕೊಳ್ಳುವುದು. ಚರ್ಮರೋಗವು ಅವನನ್ನು ತಲೆಯಿಂದ ಅಂಗಾಲಿನವರೆಗೂ ಮುಚ್ಚಿಕೊಳ್ಳುವುದು. ಯಾಜಕನು ಆ ವ್ಯಕ್ತಿಯ ಇಡೀ ದೇಹವನ್ನು ನೋಡಬೇಕು.
13 ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ಆ ವ್ಯಕ್ತಿಯ ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ಆ ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು.
14 ಆದರೆ ಆ ವ್ಯಕ್ತಿಯ ಚರ್ಮವು ಹಸಿಯಾಗಿದ್ದರೆ, ಆ ವ್ಯಕ್ತಿಯು ಶುದ್ಧನಲ್ಲ.
15 ಯಾಜಕನು ಹಸಿಯಾದ ಚರ್ಮವನ್ನು ನೋಡಿದಾಗ, ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಹಸಿಯಾದ ಚರ್ಮವು ಶುದ್ಧವಲ್ಲ. ಅದು ಕುಷ್ಠರೋಗವಾಗಿದೆ.
16 “ಹಸಿಯಾದ ಚರ್ಮವು ಬದಲಾಗಿ ಬಿಳಿಯಾದರೆ, ಆಗ ಆ ವ್ಯಕ್ತಿ ಯಾಜಕನ ಬಳಿಗೆ ಬರಬೇಕು.
17 ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.
18 “ಒಬ್ಬನ ಚರ್ಮದ ಮೇಲೆ ಹುಣ್ಣು ಎದ್ದಿದ್ದು ವಾಸಿಯಾಗಿದ್ದಿರಬಹುದು.
19 ಆದರೆ ಹುಣ್ಣಿದ್ದ ಜಾಗದಲ್ಲಿ ಬೆಳ್ಳಗಾದ ಊತವಿದ್ದರೆ ಅಥವಾ ಕೆಂಪುಬಿಳುಪು ಮಿಶ್ರವಾದ ಹೊಳೆಯುವ ಮಚ್ಚೆಯಿದ್ದರೆ, ಚರ್ಮದ ಈ ಭಾಗವನ್ನು ಯಾಜಕನಿಗೆ ತೋರಿಸಬೇಕು.
20 ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.
21 ಆದರೆ ಯಾಜಕನು ಮಚ್ಚೆಯನ್ನು ನೋಡಿದಾಗ ಅದರಲ್ಲಿ ಬಿಳಿರೋಮಗಳು ಇಲ್ಲದಿದ್ದರೆ, ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
22 ಮಚ್ಚೆಯು ಚರ್ಮದಲ್ಲಿ ಹರಡಿದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಸೋಂಕುರೋಗವಾಗಿದೆ.
23 ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
24 (24-25) “ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದ ಸುಟ್ಟಗಾಯ ಉಂಟಾಗಬಹುದು. ಹಸಿಯಾದ ಚರ್ಮವು ಬೆಳ್ಳಗಾಗಿದ್ದರೆ, ಕೆಂಪುಬಿಳುಪು ಮಿಶ್ರವಾದ ಮಚ್ಚೆಯುಳ್ಳದ್ದಾಗಿದ್ದರೆ, ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಬಿಳಿ ಕಲೆ ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಆ ಕಲೆಯಲ್ಲಿನ ರೋಮವು ಬೆಳ್ಳಗಾಗಿದ್ದರೆ, ಅದು ಕುಷ್ಠರೋಗವಾಗಿದೆ. ಆ ಕುಷ್ಠವು ಸುಟ್ಟಗಾಯದಲ್ಲಿ ಹುಟ್ಟಿದ್ದಾಗಿದೆ. ಆಗ ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
26 ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
27 ಏಳನೆಯ ದಿನದಲ್ಲಿ ಯಾಜಕನು ಮತ್ತೆ ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಮಚ್ಚೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
28 ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಉಂಟಾದ ಊತವಾಗಿದೆ. ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ.
29 “ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು.
30 ಯಾಜಕನು ಆ ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.
31 ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದ್ದಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
32 ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ,
33 ಆಗ ಆ ವ್ಯಕ್ತಿಯು ಕ್ಷೌರ ಮಾಡಿಸಿಕೊಳ್ಳಬೇಕು. ಆದರೆ ಅವನು ರೋಗ ಇರುವ ಜಾಗದಲ್ಲಿ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಆ ವ್ಯಕ್ತಿಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
34 ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು.
35 ಆದರೆ ಅವನು ಶುದ್ಧನಾದ ನಂತರ, ರೋಗವು ಚರ್ಮದ ಮೇಲೆ ಹರಡಿದರೆ,
36 ಯಾಜಕನು ಆ ವ್ಯಕ್ತಿಯನ್ನು ಮತ್ತೆ ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಂಡಿದ್ದರೆ, ಯಾಜಕನು ಹಳದಿ ಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ. ಅವನು ಅಶುದ್ಧನಾಗಿದ್ದಾನೆ.
37 ಆದರೆ ರೋಗವು ನಿಂತುಹೋಗಿ, ಕಪ್ಪಾದ ಕೂದಲು ಆ ಜಾಗದಲ್ಲಿ ಬೆಳೆಯುತ್ತಿದ್ದರೆ, ರೋಗವು ವಾಸಿಯಾಗಿದೆ ಎಂದರ್ಥ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
38 “ಒಬ್ಬ ಗಂಡಸಿನ ಅಥವಾ ಹೆಂಗಸಿನ ಚರ್ಮದ ಮೇಲೆ ಬಿಳಿ ಕಲೆಗಳು ಇದ್ದರೆ,
39 ಯಾಜಕನು ಆ ಕಲೆಗಳನ್ನು ಪರೀಕ್ಷಿಸಬೇಕು. ಆ ವ್ಯಕ್ತಿಯ ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳೀ ಬಣ್ಣದವುಗಳಾಗಿದ್ದರೆ, ಆಗ ರೋಗವು ಕೇವಲ ಚರ್ಮದಲ್ಲಿ ಹುಟ್ಟಿದ ಚಿಬ್ಬಾಗಿದೆ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.
40 “ಒಬ್ಬ ಮನುಷ್ಯನ ತಲೆಕೂದಲು ಉದುರಿಹೋಗುತ್ತಿದ್ದರೆ ಅವನು ಶುದ್ಧನಾಗಿದ್ದಾನೆ. ಅವನು ಬೋಳುತಲೆಯವನಷ್ಟೆ.
41 ಒಬ್ಬನ ತಲೆಯ ಪಾರ್ಶ್ವಗಳಿಂದ ಕೂದಲು ಉದುರಿಹೋಗುತ್ತಿದ್ದರೆ, ಅದು ಇನ್ನೊಂದು ರೀತಿಯ ಬೋಳುತಲೆಯಷ್ಟೆ.
42 ಆದರೆ ಅವನ ನೆತ್ತಿಯ ಮೇಲೆ ಕೆಂಪು ಬಿಳುಪು ಮಿಶ್ರಿತವಾದ ಸೋಂಕಿನ ಚಿಹ್ನೆ ಇದ್ದರೆ, ಅದು ಚರ್ಮರೋಗವಾಗಿದೆ.
43 ಯಾಜಕನು ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಸೋಂಕಿನಿಂದ ಉಂಟಾದ ಊತ ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿ ಕುಷ್ಠದಂತೆ ತೋರಿದರೆ,
44 ಆಗ ಆ ವ್ಯಕ್ತಿಯ ತಲೆಯಲ್ಲಿ ಕುಷ್ಠರೋಗವಿದೆ. ಅವನು ಅಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು.
45 “ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.
46 ಆ ವ್ಯಕ್ತಿಯು ತನಗೆ ರೋಗವಿರುವ ಕಾಲವೆಲ್ಲಾ ಅಶುದ್ಧನಾಗಿರುವನು. ಆ ವ್ಯಕ್ತಿಯು ಅಶುದ್ಧನಾಗಿದ್ದಾನೆ. ಅವನು ಒಂಟಿಯಾಗಿ ವಾಸಿಸಬೇಕು. ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
47 (47-48) “ಕೆಲವು ಬಟ್ಟೆಗಳಲ್ಲಿ ಬೂಷ್ಟು ಇರಬಹುದು. ಅದು ನಾರಿನ ಬಟ್ಟೆಯಾಗಲಿ ಉಣ್ಣೆ ಬಟ್ಟೆಯಾಗಲಿ ಆಗಿರಬಹುದು. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿರಬಹುದು. ಚರ್ಮದಿಂದ ಮಾಡಿದ ವಸ್ತುವಿನ ಮೇಲೂ ಬೂಷ್ಟು ಇರಬಹುದು.
49 ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ದ ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು.
50 ಯಾಜಕನು ಬೂಷ್ಟನ್ನು ನೋಡಬೇಕು. ಅವನು ಆ ವಸ್ತುವನ್ನು ಏಳು ದಿನಗಳವರೆಗೆ ಪ್ರತ್ಯೇಕವಾದ ಸ್ಥಳದಲ್ಲಿರಿಸಬೇಕು.
51 (51-52) ಏಳನೆಯ ದಿನದಲ್ಲಿ ಯಾಜಕನು ಬೂಷ್ಟನ್ನು ಪರೀಕ್ಷಿಸಬೇಕು. ಅದು ಚರ್ಮದ ಮೇಲಾಗಲಿ ಬಟ್ಟೆಯ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಇದ್ದರೆ ಅದನ್ನು ಪರೀಕ್ಷಿಸಬೇಕು. ಬೂಷ್ಟು ಹರಡಿದ್ದರೆ, ಆ ಬಟ್ಟೆ ಅಥವಾ ತೊಗಲು ಅಶುದ್ಧವಾಗಿದೆ. ಯಾಜಕನು ಅದನ್ನು ಸುಟ್ಟುಹಾಕಬೇಕು.
53 “ಬೂಷ್ಟು ಬಟ್ಟೆಯ ಮೇಲಾಗಲಿ ಚರ್ಮದ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಹರಡಿಲ್ಲವೆಂದು ಯಾಜಕನು ಕಂಡರೆ, ಅದನ್ನು ತೊಳೆಯಬೇಕು.
54 ಯಾಜಕನು ಆ ತೊಗಲನ್ನು ಅಥವಾ ಬಟ್ಟೆಯನ್ನು ತೊಳೆಯಲು ಜನರಿಗೆ ಅಪ್ಪಣೆಕೊಡಬೇಕು. ಬಳಿಕ ಯಾಜಕನು ಆ ಬಟ್ಟೆಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿರಿಸಬೇಕು.
55 ಆ ಸಮಯದನಂತರ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲವಾದರೂ ನೀವು ಬಟ್ಟೆಯನ್ನು ಅಥವಾ ತೊಗಲನ್ನು ಸುಟ್ಟುಹಾಕಬೇಕು.
56 “ಆದರೆ ಯಾಜಕನು ತೊಗಲನ್ನಾಗಲಿ ಬಟ್ಟೆಯನ್ನಾಗಲಿ ನೋಡಿದಾಗ, ತೊಳೆದನಂತರ ಬೂಷ್ಟು ಮೊಬ್ಬಾಗಿರುವುದನ್ನು ಕಂಡರೆ, ಆಗ ಯಾಜಕನು ಕಲೆ ಇರುವ ಆ ಬಟ್ಟೆಯ ಅಥವಾ ತೊಗಲಿನ ಭಾಗವನ್ನು ಕತ್ತರಿಸಿಹಾಕಬೇಕು. (ಅದು ನೇಯ್ದ ಬಟ್ಟೆಯಾಗಿದ್ದರೂ ಸರಿ, ಹೆಣೆದ ಬಟ್ಟೆಯಾಗಿದ್ದರೂ ಸರಿ.)
57 ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು.
58 ಆದರೆ, ತೊಳೆದ ನಂತರ ಬೂಷ್ಟು ತಿರುಗಿ ಬಾರದಿದ್ದರೆ, ಆ ತೊಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”
59 ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.
×

Alert

×