Bible Languages

Indian Language Bible Word Collections

Bible Versions

Books

Leviticus Chapters

Leviticus 18 Verses

Bible Versions

Books

Leviticus Chapters

Leviticus 18 Verses

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
2 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮ್ಮ ದೇವರಾಗಿರುವ ಯೆಹೋವನು.
3 ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.
4 ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು.
5 ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!
6 “ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಾನೇ ಯೆಹೋವನು!
7 “ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾfಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು.
8 ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.
9 “ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.
10 “ನೀವು ನಿಮ್ಮ ಮೊಮ್ಮಗಳೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮಗೆ ಅವಮಾನ ತರುವುದು.
11 “ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.
12 “ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ.
13 ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಾಯಿಯ ಹತ್ತಿರದ ಸಂಬಂಧಿಯಾಗಿದ್ದಾಳೆ.
14 ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನಪಡಿಸಿದಂತಾಗುವುದು. ಯಾಕೆಂದರೆ ಅವರು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ.
15 “ಸೊಸೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ಮಗನ ಹೆಂಡತಿ.
16 “ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು.
17 “ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಗಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಅವರೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು.
18 “ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.
19 “ಅಲ್ಲದೆ ಸ್ತ್ರೀಯು ಮುಟ್ಟಿನಿಂದ ಅಶುದ್ಧಳಾಗಿರುವಾಗ ಲೈಂಗಿಕ ಸಂಬಂಧಕ್ಕಾಗಿ ಆಕೆಯ ಹತ್ತಿರ ಹೋಗಬಾರದು.
20 “ನೆರೆಯವನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಶುದ್ಧರನ್ನಾಗಿ ಮಾಡುವುದು.
21 “ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!
22 “ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!
23 “ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡುವುದು. ಅಲ್ಲದೆ ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಪಡೆಯಬಾರದು. ಇಂಥ ಸಂಬಂಧ ಸ್ವಭಾವಕ್ಕೆ ವಿರುದ್ದವಾದದ್ದು.
24 “ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.
25 ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.
26 “ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಜನರಿಗಾಗಿ ಇರುತ್ತವೆ.
27 ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕಾರ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.
28 ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.
29 ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.
30 ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”

Leviticus 18:23 Kannada Language Bible Words basic statistical display

COMING SOON ...

×

Alert

×