1
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
2
|
“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮ್ಮ ದೇವರಾಗಿರುವ ಯೆಹೋವನು. |
3
|
ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ. |
4
|
ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು. |
5
|
ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು! |
6
|
“ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಾನೇ ಯೆಹೋವನು! |
7
|
“ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾfಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು. |
8
|
ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು. |
9
|
“ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು. |
10
|
“ನೀವು ನಿಮ್ಮ ಮೊಮ್ಮಗಳೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮಗೆ ಅವಮಾನ ತರುವುದು. |
11
|
“ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. |
12
|
“ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ. |
13
|
ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಾಯಿಯ ಹತ್ತಿರದ ಸಂಬಂಧಿಯಾಗಿದ್ದಾಳೆ. |
14
|
ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನಪಡಿಸಿದಂತಾಗುವುದು. ಯಾಕೆಂದರೆ ಅವರು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ. |
15
|
“ಸೊಸೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ಮಗನ ಹೆಂಡತಿ. |
16
|
“ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು. |
17
|
“ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಗಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಅವರೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು. |
18
|
“ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. |
19
|
“ಅಲ್ಲದೆ ಸ್ತ್ರೀಯು ಮುಟ್ಟಿನಿಂದ ಅಶುದ್ಧಳಾಗಿರುವಾಗ ಲೈಂಗಿಕ ಸಂಬಂಧಕ್ಕಾಗಿ ಆಕೆಯ ಹತ್ತಿರ ಹೋಗಬಾರದು. |
20
|
“ನೆರೆಯವನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಶುದ್ಧರನ್ನಾಗಿ ಮಾಡುವುದು. |
21
|
“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು! |
22
|
“ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ! |
23
|
“ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡುವುದು. ಅಲ್ಲದೆ ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಪಡೆಯಬಾರದು. ಇಂಥ ಸಂಬಂಧ ಸ್ವಭಾವಕ್ಕೆ ವಿರುದ್ದವಾದದ್ದು. |
24
|
“ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು. |
25
|
ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು. |
26
|
“ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಜನರಿಗಾಗಿ ಇರುತ್ತವೆ. |
27
|
ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕಾರ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು. |
28
|
ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು. |
29
|
ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು. |
30
|
ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.” |
Leviticus 18:26 Kannada Language Bible Words basic statistical display
COMING SOON ...