ಬಳಿಕ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಯಾಜಕನು ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಅದನ್ನು ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
“ನೀವು ಈ ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ಆ ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು.
ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಲೇಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.”
ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ.