ಮದುವೆಯಾಗದ ಸಹೋದರಿಯಾಗಿದ್ದರೆ [*ಸಹೋದರಿ ಅಕ್ಷರಶಃ, “ಕನ್ನಿಕೆ.”] ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು. (ಈ ಸಹೋದರಿಗೆ ಗಂಡನಿಲ್ಲದಿರುವುದರಿಂದ ಅವಳು ಅವನಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. ಆದ್ದರಿಂದ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು.)
ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.
“ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಮದುವೆಯಾಗಬಾರದು.
ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.
“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.
ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!
ಪ್ರಧಾನಯಾಜಕನು ಬೇರೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಪ್ರಧಾನಯಾಜಕನು ವೇಶ್ಯಾ ಸ್ತ್ರೀಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಅಥವಾ ವಿಧವೆಯನ್ನಾಗಲಿ ಮದುವೆಯಾಗಬಾರದು. ಪ್ರಧಾನಯಾಜಕನು ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ಯೆಯನ್ನು ಮದುವೆಯಾಗಬೇಕು.
ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. [†ಹೀಗಾಗಿ … ತೋರಿಸುವರು ಅಥವಾ “ಅವನ ಮಕ್ಕಳು ಇತರ ಜನರಿಂದ ಅಶುದ್ಧರಾಗುವುದಿಲ್ಲ.”] ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”
ಯಾವ ಅಂಗವಿಕಲನೂ ಯಾಜಕನಾಗಿ ಸೇವೆಮಾಡಬಾರದು; ನನಗೆ ಯಜ್ಞಗಳನ್ನು ಅರ್ಪಿಸಬಾರದು. ಯಾಜಕರಾಗಿ ಸೇವೆ ಮಾಡಬಾರದವರು ಯಾರೆಂದರೆ: ಕುರುಡರು, ಕುಂಟರು, ತಮ್ಮ ಮುಖಗಳಲ್ಲಿ ಕೆಟ್ಟದಾದ ಗಾಯದ ಗುರುತುಗಳುಳ್ಳವರು, ಬಹಳ ಉದ್ದವಾದ ಕೈಕಾಲುಗಳುಳ್ಳವರು.
ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”