1
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
2
|
“ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು. |
3
|
“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ. |
4
|
“ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು. |
5
|
5ಯೆಹೋವನ ಪಸ್ಕಹಬ್ಬವು ಮೊದಲನೆ ತಿಂಗಳ ಹದಿನಾಲ್ಕನೆಯ ದಿನದ ಸಾಯಂಕಾಲ ಅಂದರೆ ಸೂರ್ಯಸ್ತಮಾನವಾದ ಸಮಯದಲ್ಲಿ ನಡೆಯುತ್ತದೆ. ಹುಳಿಯಿಲ್ಲದ ರೊಟ್ಟಿಯ ಹಬ್ಬ |
6
|
“ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ. |
7
|
ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. |
8
|
ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.” ಪ್ರಥಮ ಬೆಳೆಗಳ ಹಬ್ಬ |
9
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
10
|
“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು. |
11
|
ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು. |
12
|
“ನೀವು ಸಿವುಡನ್ನು ನಿವಾಳಿಸುವ ದಿನದಲ್ಲಿ ಒಂದು ವರ್ಷದ ಗಂಡು ಕುರಿಮರಿಯನ್ನು ಅರ್ಪಿಸಬೇಕು. ಆ ಕುರಿಮರಿಯಲ್ಲಿ ಯಾವ ದೋಷವೂ ಇರಬಾರದು. ಅದು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿತವಾಗುವುದಕ್ಕಾಗಿ ನೇಮಿತವಾಗಿರುವುದು. |
13
|
ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ. |
14
|
ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ. |
15
|
“ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ. |
16
|
ಏಳು ವಾರಗಳು ಮುಗಿದ ಭಾನುವಾರ ಅಂದರೆ ಐವತ್ತು ದಿನಗಳ ನಂತರ ನೀವು ಯೆಹೋವನಿಗೆ ಹೊಸಬೆಳೆಯನ್ನು ಸಮರ್ಪಿಸುವಿರಿ. |
17
|
ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು. |
18
|
“ಜನರು ಸಮರ್ಪಿಸುವ ರೊಟ್ಟಿ, ಧಾನ್ಯ ಮತ್ತು ದ್ರಾಕ್ಷಾರಸಗಳೊಂದಿಗೆ ಒಂದು ಹೋರಿ, ಎರಡು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳನ್ನು ಅರ್ಪಿಸಲಾಗುವುದು. ಆ ಪಶುಗಳಲ್ಲಿ ಯಾವ ದೋಷವು ಇರಬಾರದು. ಅವುಗಳು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿತವಾಗಲಿರುವ ಸಮರ್ಪಣೆಗಳಾಗಿವೆ. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿದೆ. |
19
|
ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನ ಯಜ್ಞವಾಗಿ ಒಂದು ವರ್ಷದ ಎರಡು ಮರಿಟಗರುಗಳನ್ನೂ ಅರ್ಪಿಸಬೇಕು. |
20
|
“ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತದೆ. ಅವು ಯಾಜಕರಿಗೆ ಸಲ್ಲುತ್ತವೆ. |
21
|
ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು. |
22
|
“ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!” |
23
|
ಯೆಹೋವನು ತಿರುಗಿ ಮೋಶೆಗೆ ಹೇಳಿದ್ದೇನೆಂದರೆ: |
24
|
“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನವಾಗಿರಬೇಕು. ಆಗ ನೀವು ಪವಿತ್ರಸಭೆಯಾಗಿ ಸೇರಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಊದಿಸಬೇಕು. |
25
|
ನೀವು ಯಾವ ಕೆಲಸವನ್ನೂ ಮಾಡಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯನ್ನು ಸಲ್ಲಿಸುವಿರಿ.” |
26
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
27
|
“ಏಳನೆಯ ತಿಂಗಳಿನ ಹತ್ತನೆಯ ದಿನವು ದೋಷಪರಿಹಾರಕ ದಿನವಾಗಿರುವುದು. ಆಗ ಪವಿತ್ರ ಸಭೆಯಾಗಿ ಸೇರಬೇಕು. ನೀವು ಆಹಾರವನ್ನು ತಿನ್ನಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಕಾಣಿಕೆಯನ್ನು ಸಲ್ಲಿಸಬೇಕು. |
28
|
ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು. |
29
|
“ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು. |
30
|
ಈ ದಿನದಲ್ಲಿ ಕೆಲಸಮಾಡುವವನನ್ನು ಇಸ್ರೇಲರೊಂದಿಗೆ ಇರದಂತೆ ನಾಶಮಾಡುವೆನು. |
31
|
ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ. |
32
|
ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.” |
33
|
“ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
34
|
“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು. |
35
|
ಮೊದಲನೆಯ ದಿನದಲ್ಲಿ ಪವಿತ್ರಸಭೆಯಾಗಿ ಸೇರಬೇಕು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. |
36
|
ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. |
37
|
“ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು. |
38
|
ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು. |
39
|
“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು. |
40
|
ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು. |
41
|
ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು. |
42
|
ನೀವು ಏಳು ದಿನಗಳವರೆಗೆ ಪರ್ಣಶಾಲೆಗಳಲ್ಲಿ ವಾಸಿಸಬೇಕು. ಇಸ್ರೇಲರಲ್ಲಿ ಹುಟ್ಟಿದವರೆಲ್ಲರೂ ಆ ಪರ್ಣಶಾಲೆಗಳಲ್ಲಿ ವಾಸಿಸುವರು. |
43
|
ನಾನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ಕರೆದು ತಂದಾಗ, ಈ ಪರ್ಣಶಾಲೆಗಳಲ್ಲಿ ವಾಸಿಸುವಂತೆ ಮಾಡಿದವನು ನಾನೇ ಎಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಾನೇ ನಿಮ್ಮ ದೇವರಾದ ಯೆಹೋವನು!” |
44
|
ಆದ್ದರಿಂದ ಮೋಶೆಯು ಯೆಹೋವನನ್ನು ಸನ್ಮಾನಿಸುವುದಕ್ಕಾಗಿ ಸೇರಿಬರುವ ವಿಶೇಷ ಸಭೆಗಳ ಕುರಿತು ಜನರಿಗೆ ಹೇಳಿದನು. |
Leviticus 23:26 Kannada Language Bible Words basic statistical display
COMING SOON ...