“ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.
ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.
ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”
ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)
“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.
ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.
ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.