1
|
ಯೆಹೋವನು ಮೋಶೆಯೊಡನೆ ಮಾತನಾಡಿ ಹೇಳಿದ್ದೇನೆಂದರೆ: |
2
|
“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ: |
3
|
“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು. |
4
|
ಅಭಿಷಿಕ್ತನಾದ ಯಾಜಕನು ಹೋರಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. |
5
|
ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು. |
6
|
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾ ಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು. |
7
|
ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.) |
8
|
ಅವನು ಪಾಪಪರಿಹಾರಕ ಯಜ್ಞಕ್ಕಾಗಿ ತಂದಿರುವ ಹೋರಿಯ ಕೊಬ್ಬನ್ನೆಲ್ಲಾ ತೆಗೆಯಬೇಕು. ಅವನು ಅದರ ಒಳಗಿನ ಭಾಗಗಳ ಮೇಲೆ ಮತ್ತು ಅವುಗಳ ಸುತ್ತಲೂ ಇರುವ ಕೊಬ್ಬನ್ನೂ |
9
|
ಅದರ ಎರಡು ಮೂತ್ರಪಿಂಡಗಳನ್ನೂ ಅವುಗಳ ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತೆಗೆಯಬೇಕು. ಅವನು ಮೂತ್ರ ಪಿಂಡಗಳೊಡನೆ ಪಿತ್ತಾಶಯವನ್ನೂ ತೆಗೆಯಬೇಕು. |
10
|
ಯಾಜಕನು ಈ ಭಾಗಗಳನ್ನು ಸಮಾಧಾನಯಜ್ಞ ಸಮರ್ಪಣೆಯಲ್ಲಿ ಹೋರಿಯ ಭಾಗಗಳನ್ನು ಅರ್ಪಿಸುವ ರೀತಿಯಲ್ಲಿಯೇ ಅರ್ಪಿಸಬೇಕು. ಯಾಜಕನು ಪಶುವಿನ ಭಾಗಗಳನ್ನು ಸರ್ವಾಂಗಹೋಮಮಾಡುವ ವೇದಿಕೆಯ ಮೇಲೆ ಹೋಮ ಮಾಡಬೇಕು. |
11
|
[This verse may not be a part of this translation] |
12
|
[This verse may not be a part of this translation] |
13
|
“ಇಸ್ರೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದವುಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿದರೆ ಅವರು ದೋಷಿಗಳಾಗುವರು. |
14
|
ಆ ಪಾಪದ ಕುರಿತು ಅವರಿಗೆ ತಿಳಿದುಬಂದರೆ ಆಗ ಅವರು ಒಂದು ಹೋರಿಯನ್ನು ಇಡೀ ಜನಾಂಗದ ಪಾಪಪರಿಹಾರ ಮಾಡುವ ಸಮರ್ಪಣೆಯಾಗಿ ಅರ್ಪಿಸಬೇಕು. ಅವರು ಹೋರಿಯನ್ನು ದೇವದರ್ಶನಗುಡಾರಕ್ಕೆ ತರಬೇಕು. |
15
|
ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು. |
16
|
ಬಳಿಕ ಅಭಿಷಿಕ್ತನಾದ ಯಾಜಕನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು. |
17
|
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು. |
18
|
ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.) |
19
|
ತರುವಾಯ ಯಾಜಕನು ಪಶುವಿನಿಂದ ಕೊಬ್ಬನ್ನೆಲ್ಲಾ ತೆಗೆದು ಅದನ್ನು ವೇದಿಕೆಯ ಮೇಲೆ ಹೋಮಮಾಡಬೇಕು. |
20
|
ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು. |
21
|
ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ. |
22
|
“ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ. |
23
|
ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು. |
24
|
ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ. |
25
|
ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು, |
26
|
ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನ ಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು. |
27
|
“ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ. |
28
|
ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು. |
29
|
ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಸರ್ವಾಂಗಹೋಮಮಾಡುವ ಸ್ಥಳದಲ್ಲಿ ಅದನ್ನು ವಧಿಸಬೇಕು. |
30
|
ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. |
31
|
ಯಾಜಕನು ಸಮಾಧಾನ ಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. |
32
|
“ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು. |
33
|
ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಅದನ್ನು ಸರ್ವಾಂಗಹೋಮದ ಯಜ್ಞಪಶುಗಳನ್ನು ವಧಿಸುವ ಸ್ಥಳದಲ್ಲಿ ಪಾಪಪರಿಹಾರಕಯಜ್ಞವಾಗಿ ವಧಿಸಬೇಕು. |
34
|
ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು. |
35
|
ಯಾಜಕನು ಸಮಾಧಾನ ಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. |
Leviticus 4:22 Kannada Language Bible Words basic statistical display
COMING SOON ...