Bible Languages

Indian Language Bible Word Collections

Bible Versions

Books

Leviticus Chapters

Leviticus 7 Verses

Bible Versions

Books

Leviticus Chapters

Leviticus 7 Verses

1 “ದೋಷಪರಿಹಾರಕ ಯಜ್ಞದ ನಿಯಮಗಳು: ಅದು ಪವಿತ್ರವಾದದ್ದು.
2 ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು.
3 “ಯಾಜಕನು ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನೆಲ್ಲಾ ಅರ್ಪಿಸಬೇಕು. ಅವನು ಬಾಲದ ಕೊಬ್ಬನ್ನು ಮತ್ತು ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೆಲ್ಲಾ ಸಮರ್ಪಿಸಬೇಕು.
4 ಯಾಜಕನು ಅದರ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಅರ್ಪಿಸಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನು ಅರ್ಪಿಸಬೇಕು.
5 ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ.
6 “ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.
7 ಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು.
8 ಯಜ್ಞಮಾಡುವ ಯಾಜಕನು ಸರ್ವಾಂಗಹೋಮ ಪಶುವಿನ ಚರ್ಮವನ್ನು ಪಡೆಯಬಹುದು. ದೋಷಪರಿಹಾರಕ ಯಜ್ಞಗಳು
9 ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.
10 ಧಾನ್ಯಸಮರ್ಪಣೆಗಳು ಆರೋನನ ಪುತ್ರರಿಗೆ ಸೇರುವವು. ಅದು ಒಣಗಿದ್ದರೂ ಎಣ್ಣೆಯಿಂದ ಬೆರೆತಿದ್ದರೂ ಅವರಿಗೆ ಸೇರುವವು. ಯಾಜಕರಾದ ಆರೋನನ ಪುತ್ರರೆಲ್ಲರೂ ಈ ಆಹಾರವನ್ನು ಹಂಚಿಕೊಳ್ಳುವರು.
11 “ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನ ಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,
12 ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.
13 ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನ ಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು.
14 ಸಮರ್ಪಿಸಲ್ಪಟ್ಟ ಪ್ರತಿಯೊಂದು ಪದಾರ್ಥಗಳಲ್ಲೂ ಒಂದೊಂದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಸಮಾಧಾನಯಜ್ಞದ ರಕ್ತವನ್ನು ಚಿಮಿಕಿಸುವ ಯಾಜಕನಿಗೆ ಇದು ಸಲ್ಲತಕ್ಕದ್ದು.
15 ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಈ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು.
16 “ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.
17 ಆದರೆ ಈ ಯಜ್ಞಪಶುವು ಮೂರನೆಯ ದಿನದವರೆಗೆ ಉಳಿದರೆ, ಅದನ್ನು ಬೆಂಕಿಯಲ್ಲಿ ಸುಡಬೇಕು.
18 ಒಬ್ಬನು ತನ್ನ ಸಮಾಧಾನ ಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.
19 “ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಈ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು.
20 ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.
21 “ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನ ಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”
22 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
23 “ಇಸ್ರೇಲರಿಗೆ ಹೀಗೆ ಹೇಳು: ನೀವು ದನಗಳ, ಕುರಿಗಳ ಅಥವಾ ಹೋತಗಳ ಕೊಬ್ಬನ್ನು ತಿನ್ನಬಾರದು.
24 ನೀವು ತನ್ನಷ್ಟಕ್ಕೆ ತಾನೇ ಸತ್ತ ಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು.
25 ಯಾವನಾದರೂ ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾದ ಪಶುವಿನ ಕೊಬ್ಬನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಬೇಕು.
26 “ನೀವು ಎಲ್ಲಿಯೇ ವಾಸಿಸಿದರೂ, ಯಾವುದೇ ಪಕ್ಷಿಯ ಅಥವಾ ಯಾವುದೇ ಪ್ರಾಣಿಯ ರಕ್ತವನ್ನು ನೀವು ಎಂದಿಗೂ ತಿನ್ನಬಾರದು.
27 ಯಾವನಾದರೂ ರಕ್ತವನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಲ್ಪಡಬೇಕು.”
28 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
29 “ಇಸ್ರೇಲರಿಗೆ ಹೇಳು. ಒಬ್ಬನು ಯೆಹೋವನಿಗೆ ಸಮಾಧಾನಯಜ್ಞಕ್ಕಾಗಿ ಪಶುವನ್ನು ತಂದರೆ, ಯೆಹೋವನಿಗೆ ಸಲ್ಲತಕ್ಕ ಭಾಗವನ್ನು ಆತನಿಗೆ ಕೊಡಬೇಕು.
30 ಕಾಣಿಕೆಯ ಆ ಭಾಗವು ಆಗ್ನಿಯಲ್ಲಿ ಹೋಮಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಆ ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ ಯಾಜಕನ ಬಳಿಗೆ ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು.
31 ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರುವವು.
32 ನೀವು ಸಮಾಧಾನ ಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು.
33 ಪಶುವಿನ ಬಲ ತೊಡೆಯ ಭಾಗವು ಸಮಾಧಾನ ಯಜ್ಞದಲ್ಲಿ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುವ ಯಾಜಕನಿಗೆ ಸೇರುತ್ತವೆ.
34 ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ ಪಶುವಿನ ಎದೆಯ ಭಾಗವನ್ನು ಮತ್ತು ಸಮಾಧಾನ ಯಜ್ಞಗಳಲ್ಲಿ ಪಶುವಿನ ಬಲ ತೊಡೆಯನ್ನು ಯೆಹೋವನಾದ ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ಈ ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು.”
35 ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.
36 ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.
37 ಅವುಗಳೇ ಸರ್ವಾಂಗಹೋಮಗಳ, ಧಾನ್ಯಸಮರ್ಪಣೆಗಳ, ಪಾಪಪರಿಹಾರಕ ಯಜ್ಞಗಳ, ದೋಷಪರಿಹಾರಕ ಯಜ್ಞಗಳ, ಸಮಾಧಾನ ಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ.
38 ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು.

Leviticus 7:12 Kannada Language Bible Words basic statistical display

COMING SOON ...

×

Alert

×