1
|
ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ. |
2
|
ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ. |
3
|
ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ. |
4
|
ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನಿನಗೆ ಸ್ಪಷ್ಟವಾಗಿರುವುದು. |
5
|
ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್. |
6
|
ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು. |
7
|
ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು. |
8
|
ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು. |
9
|
ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು. |
10
|
ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು. |
11
|
ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು. |
12
|
ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು. |
13
|
ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು. |
14
|
ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು. |
15
|
ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. |
16
|
“ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು. |
17
|
ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು. |
18
|
ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು. |
19
|
ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ. |
20
|
ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು. |
21
|
ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು. |
22
|
ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದುದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು. |
23
|
ತನ್ನ ಯಾಜಕಸೇವೆಯ ಸರದಿಯು ಮುಗಿದ ಮೇಲೆ ಜಕರೀಯನು ಮನೆಗೆ ಹಿಂತಿರುಗಿ ಹೋದನು. |
24
|
ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ. |
25
|
ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು. |
26
|
[This verse may not be a part of this translation] |
27
|
[This verse may not be a part of this translation] |
28
|
ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು. |
29
|
ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು. |
30
|
ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ. |
31
|
ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, “ಯೇಸು” ಎಂದು ಹೆಸರಿಡಬೇಕು. |
32
|
ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು. |
33
|
ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು. |
34
|
ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು. |
35
|
ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ನೆನಿಸಿಕೊಳ್ಳುವನು. |
36
|
ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ. |
37
|
ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು. |
38
|
ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು. |
39
|
ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು. |
40
|
ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. |
41
|
ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ |
42
|
ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ. |
43
|
ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ! |
44
|
ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು. |
45
|
ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು. |
47
|
“ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ. ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ. |
48
|
ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು. |
49
|
ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು. |
50
|
ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು. |
51
|
ಆತನು ತನ್ನ ಭುಜಬಲವನ್ನು ತೋರಿ ಗರ್ವಿಷ್ಠರನ್ನು ಚದರಿಸುತ್ತಾನೆ. |
52
|
ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ ದೀನರನ್ನು ಉನ್ನತಿಗೇರಿಸುತ್ತಾನೆ. |
53
|
ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ. |
54
|
ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ |
55
|
ಕರುಣೆತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ.” ಎಂದಳು. |
56
|
ಮರಿಯಳು ಸುಮಾರು ಮೂರು ತಿಂಗಳ ಕಾಲ ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂತಿರುಗಿದಳು. |
57
|
ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು. |
58
|
ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು. |
59
|
ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು. |
60
|
ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು. |
61
|
ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು. |
62
|
ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು. |
63
|
ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು. |
64
|
ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು. |
65
|
ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು. |
66
|
ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು. |
67
|
ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: |
68
|
“ಇಸ್ರೇಲರ (ಯೆಹೂದ್ಯರ) ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ. |
69
|
ತನ್ನ ಸೇವಕನಾದ ದಾವೀದನ ಮನೆತನದಿಂದ ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ. |
70
|
ಇದನ್ನು ಆತನು ಪೂರ್ವಕಾಲದ ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ. |
71
|
ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ. |
72
|
ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ. |
73
|
ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ. |
74
|
[This verse may not be a part of this translation] |
75
|
[This verse may not be a part of this translation] |
76
|
ಮಗುವೇ, “ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ. |
77
|
ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ. |
78
|
ನಮ್ಮ ದೇವರ ಮಹಾಕರುಣೆಯಿಂದ ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು. |
79
|
ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.” |
80
|
ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ (ಯೆಹೂದ್ಯರಿಗೆ) ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು. |
Luke 1:69 Kannada Language Bible Words basic statistical display
COMING SOON ...