ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.
ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.
“ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ‘ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!’ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.
ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.
ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.
ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
“ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.
“ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು.
“ಒಬ್ಬ ಅರಸನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವಾಗ, ಮೊದಲು ಅವನು ಕುಳಿತುಕೊಂಡು ಯೋಜನೆ ಮಾಡುವನು. ಅರಸನ ಬಳಿಯಲ್ಲಿ ಕೇವಲ ಹತ್ತುಸಾವಿರ ಮಂದಿ ಸೈನಿಕರಿದ್ದರೆ, ಇಪ್ಪತ್ತುಸಾವಿರ ಮಂದಿ ಸೈನಿಕರಿರುವ ಇನ್ನೊಬ್ಬ ಅರಸನನ್ನು ಸೋಲಿಸಲು ತನಗೆ ಸಾಧ್ಯವೇ ಎಂದು ಆಲೋಚಿಸುವನು.
“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!
(ಮತ್ತಾಯ 5:13; ಮಾರ್ಕ 9:50) “ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ.