Bible Languages

Indian Language Bible Word Collections

Bible Versions

Books

Luke Chapters

Luke 16 Verses

Bible Versions

Books

Luke Chapters

Luke 16 Verses

1 ಯೇಸು ತನ್ನ ಶಿಷ್ಯರಿಗೆ ಇಂತೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.
2 ಆದ್ದರಿಂದ ಅವನು ಆ ಮೇಲ್ವಿಚಾರಕನನ್ನು ಕರೆದು, ؅ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು.
3 ಆಗ, ಆ ಮೇಲ್ವಿಚಾರಕನು ತನ್ನೊಳಗೆ, ؅ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.
4 ಈಗ ನಾನೇನು ಮಾಡಬೇಕೆಂಬುದು ನನಗೆ ಗೊತ್ತಿದೆ! ನಾನು ಕೆಲಸವನ್ನು ಕಳೆದುಕೊಂಡ ಮೇಲೆ ಬೇರೆ ಜನರು ನನ್ನನ್ನು ತಮ್ಮ ಮನೆಗಳಿಗೆ ಸೇರಿಸಿಕೊಳ್ಳುವಂಥ ಕಾರ್ಯವೊಂದನ್ನು ನಾನು ಈಗ ಮಾಡುವೆ’ ಅಂದುಕೊಂಡನು.
5 ಆಮೇಲೆ ಆ ಮೇಲ್ವಿಚಾರಕನು, ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದನು. ಅವನು ಮೊದಲನೆಯವನಿಗೆ, ؅ನೀನು ನನ್ನ ಯಜಮಾನನಿಗೆ ಎಷ್ಟು ಸಾಲ ಕೊಡಬೇಕು?’ ಎಂದು ಕೇಳಿದನು.
6 ಅದಕ್ಕೆ ಮೊದಲನೆಯ ವ್ಯಕ್ತಿ, ؅ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ؅ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.
7 ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ؅ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ؅ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು؆ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ؅ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.
8 ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ؅ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.
9 "ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.
10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.
11 ಲೌಕಿಕ ಐಶ್ವರ್ಯಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ಪರಲೋಕದ ಐಶ್ವರ್ಯಗಳಲ್ಲಿಯೂ ನೀವು ನಂಬಿಗಸ್ತರಾಗಿರುವುದಿಲ್ಲ.
12 ಮತ್ತೊಬ್ಬನ ಸ್ವತ್ತುಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ನಿಮ್ಮ ಸ್ವಂತ ಸ್ವತ್ತುಗಳನ್ನೇ ನಿಮಗೆ ಯಾರೂ ಕೊಡುವುದಿಲ್ಲ.
13 "ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”
14 ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.
15 ಯೇಸು ಫರಿಸಾಯರಿಗೆ ಇಂತೆಂದನು, "ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.
16 "ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.
17 ಧರ್ಮಶಾಸ್ತ್ರದಲ್ಲಿರುವ ಒಂದು ಚುಕ್ಕೆಯು ಬದಲಾಗುವುದಕ್ಕಿಂತಲೂ ಭೂಮ್ಯಾಕಾಶಗಳು ಅಳಿದು ಹೋಗುವುದು ಸುಲಭ.
18 "ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹ ವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
19 ಯೇಸು ಇಂತೆಂದನು: ‘ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.
20 ಅಲ್ಲಿ ಲಾಜರನೆಂಬ ಒಬ್ಬ ಬಡಮನುಷ್ಯನೂ ಇದ್ದನು. ಅವನ ಮೈತುಂಬ ಹುಣ್ಣುಗಳಿದ್ದವು. ಅವನು ಐಶ್ವರ್ಯವಂತನ ಮನೆಯ ಹೊರಬಾಗಿಲ ಬಳಿ ಬಿದ್ದುಕೊಂಡಿರುತ್ತಿದ್ದನು.
21 ಐಶ್ವರ್ಯವಂತನು ಊಟ ಮಾಡಿದ ಮೇಲೆ ಹೊರಗೆಸೆದ ಎಂಜಲನ್ನು ತಿನ್ನುವುದಕ್ಕಾಗಿ ಅಲ್ಲಿ ಬಿದ್ದುಕೊಂಡಿರುತ್ತಿದ್ದನು. ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22 ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.
23 ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,
24 ؅ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!؆ ಎಂದು ಬೇಡಿಕೊಂಡನು.
25 ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೊ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.
26 ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.
27 ಐಶ್ವರ್ಯವಂತನು, ؅ಹಾಗಾದರೆ, ದಯಮಾಡಿ ಲಾಜರನನ್ನು ಭೂಲೋಕದಲ್ಲಿರುವ ನನ್ನ ತಂದೆಯ ಮನೆಗೆ ಕಳುಹಿಸು!
28 ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.
29 ಅದಕ್ಕೆ ಅಬ್ರಹಾಮನು, ؅ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.
30 ಅದಕ್ಕೆ ಐಶ್ವರ್ಯವಂತನು, ؅ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು.
31 ಅದಕ್ಕೆ ಅಬ್ರಹಾಮನು ಅವನಿಗೆ, ؅ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ؆” ಎಂದು ಹೇಳಿದನು.

Luke 16:1 Kannada Language Bible Words basic statistical display

COMING SOON ...

×

Alert

×