1
|
ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ! |
2
|
ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ. |
3
|
ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು. |
4
|
ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು. |
5
|
ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!؆ ಎಂದು ಕೇಳಿಕೊಂಡರು. |
6
|
ಪ್ರಭುವು ಅವರಿಗೆ ಇಂತೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!؆ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ. |
7
|
”ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ? |
8
|
ಇಲ್ಲ! ನೀನು ಅವನಿಗೆ, ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ. |
9
|
ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ. |
10
|
ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.” |
11
|
ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು. |
12
|
ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು. |
13
|
ಆದರೆ ಅವರು ‘ಯೇಸುವೇ! ಗುರುವೇ! ದಯಾಮಾಡಿ ನಮಗೆ ಸಹಾಯಮಾಡು!؆ ಎಂದು ಕೂಗಿಕೊಂಡರು. |
14
|
ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು. |
15
|
ಅವರಲ್ಲಿ ಒಬ್ಬನು ತನಗೆ ಗುಣವಾದುದ್ದನ್ನು ಕಂಡು ಯೇಸುವಿನ ಬಳಿಗೆ ಹಿಂತಿರುಗಿ ಬಂದು ಗಟ್ಟಿಯಾದ ಧ್ವನಿಯಿಂದ ದೇವರನ್ನು ಕೊಂಡಾಡಿದನು. |
16
|
ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.) |
17
|
ಯೇಸು, “ಹತ್ತು ಜನರಿಗೆ ವಾಸಿಯಾಯಿತಲ್ಲಾ! ಇನ್ನುಳಿದ ಒಂಭತ್ತು ಮಂದಿ ಎಲ್ಲಿ? |
18
|
ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?؆” ಎಂದು ಕೇಳಿದನು. |
19
|
ಬಳಿಕ ಯೇಸು ಅವನಿಗೆ, “ಎದ್ದೇಳು! ಈಗ ನೀನು ಮನೆಗೆ ಹೋಗು! ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಅಂದನು. |
20
|
ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ. |
21
|
”ಇಗೋ, ದೇವರ ರಾಜ್ಯವು ಇಲ್ಲಿದೆ’! ಅಗೋ ಅಲ್ಲಿದೆ؆! ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು. |
22
|
ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ. |
23
|
ಜನರು ನಿಮಗೆ, ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ. |
24
|
”ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು. |
25
|
ಆದರೆ ಅದಕ್ಕಿಂತಲೂ ಮೊದಲು, ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಿ ಈ ಕಾಲದ ಜನರಿಂದ ತಿರಸ್ಕರಿಸಲ್ಪಡುವನು. |
26
|
ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು. |
27
|
ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು. |
28
|
ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು. |
29
|
ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು. |
30
|
ಮನುಷ್ಯಕುಮಾರನು ತಿರುಗಿ ಬರುವಾಗ ಲೋಕದ ಸ್ಥಿತಿ ಅದೇ ರೀತಿಯಲ್ಲಿರುವುದು. |
31
|
”ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ. |
32
|
ಲೋಟನ ಹೆಂಡತಿಗೆ ಸಂಭವಿಸಿದ್ದು ಜ್ಞಾಪಕವಿದೆಯೇ? |
33
|
ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು. |
34
|
ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. |
35
|
ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.” |
36
|
[This verse may not be a part of this translation] |
37
|
ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣವಿದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು. |
Luke 17:1 Kannada Language Bible Words basic statistical display
COMING SOON ...