ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.
ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.
ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”
ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.
ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.” ದೇವರ ರಾಜ್ಯಕ್ಕೆ ಯಾರು ಪ್ರವೇಶಿಸುವರು? (ಮತ್ತಾಯ 19:13-15; ಮಾರ್ಕ 10:13-16)
ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.
ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ” [✡ಉಲ್ಲೇಖನ: ವಿಮೋಚನ. 20:12-16; ಧರ್ಮೋಪದೇಶ. 5:16-20.] ಎಂದನು.
ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.
ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು.
(ಮತ್ತಾಯ 20:17-19; ಮಾರ್ಕ 10:32-34) ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!
ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.
ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.