1
|
ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು. |
2
|
ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು. |
3
|
ಜನರೆಲ್ಲರೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ತಮ್ಮತಮ್ಮ ಊರುಗಳಿಗೆ ಪ್ರಯಾಣ ಮಾಡಿದರು. |
4
|
ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು. |
5
|
ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.) |
6
|
ಅವರು ಬೆತ್ಲೆಹೇಮಿನಲ್ಲಿದ್ದಾಗ ಮರಿಯಳಿಗೆ ಹೆರಿಗೆಕಾಲ ಬಂತು. |
7
|
ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದುದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು. |
8
|
ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು. |
9
|
ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು. |
10
|
ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನಂದರೆ: |
11
|
ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು. |
12
|
ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು. |
13
|
ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ, |
14
|
“ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು. |
15
|
ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು. |
16
|
ಆದುದರಿಂದ ಕುರುಬರು ಬೇಗನೆ ಹೋಗಿ ಮರಿಯಳನ್ನೂ ಯೋಸೇಫನನ್ನೂ ದನದ ಕೊಟ್ಟಿಗೆಯಲ್ಲಿ ಮಲಗಿದ್ದ ಮಗುವನ್ನೂ ಕಂಡುಕೊಂಡರು. |
17
|
ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು. |
18
|
ಕುರುಬರು ತಿಳಿಸಿದ್ದನ್ನು ಕೇಳಿದ ಅವರೆಲ್ಲರೂ ಆಶ್ಚರ್ಯಪಟ್ಟರು. |
19
|
ಮರಿಯಳು ಈ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು, ಅವುಗಳ ಬಗ್ಗೆ ಯೋಚಿಸತೊಡಗಿದಳು. |
20
|
ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿ ಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು. |
21
|
ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ ‘ಯೇಸು’ ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು. |
22
|
ಶುದ್ಧೀಕರಣದ ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಅತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು. |
23
|
ಏಕೆಂದರೆ “ಪ್ರತಿ ಕುಟುಂಬದಲ್ಲಿ, ‘ಚೊಚ್ಚಲು ಗಂಡುಮಗುವನ್ನು ಪ್ರಭುವಿಗೆ ಪ್ರತಿಷ್ಠಿಸಬೇಕು”‘ ಎಂದು ಪ್ರಭುವಿನ ಧರ್ಮಶಾಸ್ತ್ರದಲ್ಲಿ ಬರೆದಿದೆ. |
24
|
“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದುದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು. |
25
|
ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ (ಯೆಹೂದ್ಯರಿಗೆ) ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು. |
26
|
ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು. |
27
|
ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು. |
28
|
ಸಿಮೆಯೋನನು ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರಿಗೆ ಹೀಗೆಂದು ಸ್ತೋತ್ರ ಸಲ್ಲಿಸಿದನು: |
29
|
“ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ. |
30
|
ನೀನು ದಯಪಾಲಿಸಿದ ರಕ್ಷಕನನ್ನು ಕಣ್ಣಾರೆಕಂಡೆನು. |
31
|
ನೀನು ಆತನನ್ನು ಜನರೆಲ್ಲರಿಗೆ ಪ್ರತ್ಯಕ್ಷ ಮಾಡಿರುವೆ. |
32
|
ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ (ಯೆಹೂದ್ಯರಿಗೆ) ಕೀರ್ತಿಯಾಗುವುದು.” |
33
|
ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು. |
34
|
ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು. |
35
|
ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು. |
36
|
ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು. |
37
|
ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು. |
38
|
ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರು ನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು. |
39
|
ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು. |
40
|
ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು. |
41
|
ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದರು. |
42
|
ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು. |
43
|
ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ |
44
|
ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು. |
45
|
ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು. |
46
|
ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು. |
47
|
ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು. |
48
|
ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು. |
49
|
ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು. |
50
|
ಆದರೆ ಆತನ ಮಾತು ಅವರಿಗೆ ಅರ್ಥವಾಗಲಿಲ್ಲ. |
51
|
ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು. |
52
|
ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು. |
Luke 2:1 Kannada Language Bible Words basic statistical display
COMING SOON ...