ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.
ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.
ಮಗುವಿಗೆ ಎಂಟು ದಿನವಾದಾಗ ಸುನ್ನತಿ [*ಸುನ್ನತಿ ಜನನಾಂಗದ ಮುಂದೊಗಲನ್ನು ಕತ್ತರಿಸುವುದು. ಪ್ರತಿ ಯೆಹೂದ್ಯ ಗಂಡುಮಗುವಿಗೆ ಹೀಗೆ ಮಾಡುತ್ತಿದ್ದರು. ದೇವರು ಅಬ್ರಹಾಮನೊಂದಿಗೆ ಮಾಡಿದ ಒಡಂಬಡಿಕೆಗೆ ಅದು ಸೂಚನೆಯಾಗಿತ್ತು. ಆದಿಕಾಂಡ 17:9-14.] ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.
ಶುದ್ಧೀಕರಣದ [†ಶುದ್ಧೀಕರಣ ಯೆಹೂದ್ಯ ಸ್ತ್ರೀಯು ಮಗುವನ್ನು ಹೆತ್ತು ನಲವತ್ತು ದಿನಗಳಾದ ನಂತರ ದೇವಾಲಯದಲ್ಲಿ ನಡೆಸುವ ಒಂದು ಸಂಸ್ಕಾರದ ಮೂಲಕ ಶುದ್ಧಿಯಾಗಬೇಕು ಎಂದು ಮೋಶೆಯ ಧರ್ಮಶಾಸ್ತ್ರ ಹೇಳಿದೆ. ನೋಡಿರಿ: ಯಾಜಕ. 12:2-8.] ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” [✡ಉಲ್ಲೇಖನ: ಯಾಜಕ. 12:8.] ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.
ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.
ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.
ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ [**ಪ್ರವಾದಿನಿ ದೇವರ ಸಂದೇಶವನ್ನು ತಿಳಿಸುವ ಸ್ತ್ರೀ.] ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.
ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.
ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ [††ಪಸ್ಕಹಬ್ಬ ಯೆಹೂದ್ಯರಿಗೆ ಪ್ರಾಮುಖ್ಯವಾದ ಪರಿಶುದ್ಧ ದಿನ. ಮೋಶೆಯ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನ ದಾಸತ್ವದಿಂದ ಬಿಡಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಈ ದಿನದಲ್ಲಿ ವಿಶೇಷ ಹಬ್ಬವನ್ನು ಆಚರಿಸುತ್ತಿದ್ದರು.] ಜೆರುಸಲೇಮಿಗೆ ಹೋಗುತ್ತಿದ್ದರು.
ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ
ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.
ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.