1
|
ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು, |
2
|
”ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಈ ಸಂಗತಿಗಳನ್ನು ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು. |
3
|
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. |
4
|
ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂತೋ ಅಥವಾ ಮನುಷ್ಯರಿಂದ ಬಂತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು. |
5
|
ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂತು” ಎಂದು ಉತ್ತರಕೊಟ್ಟರೆ, ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು. |
6
|
ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು. |
7
|
ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. |
8
|
ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು. |
9
|
ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. |
10
|
ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು. |
11
|
ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು. |
12
|
ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು. |
13
|
ಆಗ ತೋಟದ ಯಜಮಾನನು, ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು. |
14
|
ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು. |
15
|
ಬಳಿಕ ಆ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು. “ಆಗ ತೋಟದ ಯಜಮಾನನು ಏನು ಮಾಡುವನು? |
16
|
ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು. |
17
|
ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಕೀರ್ತನೆ 118:22 ಎಂಬ ವಚನದ ಅರ್ಥವೇನು? |
18
|
ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು. |
19
|
ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ. |
20
|
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.) |
21
|
ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ! |
22
|
ಈಗ ಹೇಳು, ನಾವು ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ತಪ್ಪೋ?” ಎಂದು ಕೇಳಿದರು. |
23
|
ಆದರೆ ಈ ಜನರು ತನಗೆ ಮೋಸಮಾಡಲು ಪ್ರಯತ್ನಿಸುತ್ತಿದ್ದಾರೆಂದು ಯೇಸುವಿಗೆ ತಿಳಿದಿತ್ತು. |
24
|
ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು. |
25
|
ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು. |
26
|
ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ. |
27
|
ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದಿವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ, |
28
|
”ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ. |
29
|
ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತು ಹೋದನು. ಅವನಿಗೆ ಮಕ್ಕಳಿರಲಿಲ್ಲ. |
30
|
ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. |
31
|
ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು. |
32
|
ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. |
33
|
ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು. |
34
|
ಯೇಸು ಸದ್ದುಕಾಯರಿಗೆ, “ಭೂಲೋಕದಲ್ಲಿ ಜನರು ಒಬ್ಬರನ್ನೊಬ್ಬರು ಮದುವೆ ಆಗುತ್ತಾರೆ. |
35
|
ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ. |
36
|
ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ. |
37
|
ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ. |
38
|
ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು. |
39
|
ಧರ್ಮೋಪದೇಶಕರಲ್ಲಿ ಕೆಲವರು, “ಬೋಧಕನೇ, ನೀನು ಒಳ್ಳೆಯ ಉತ್ತರವನ್ನು ಕೊಟ್ಟಿರುವೆ” ಎಂದು ಹೇಳಿದರು. |
40
|
ಇನ್ನೊಂದು ಪ್ರಶ್ನೆಯನ್ನು ಆತನಿಗೆ ಕೇಳುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. |
41
|
ಆಗ ಯೇಸು, “ಕ್ರಿಸ್ತನು ದಾವೀದನ ಮಗನೆಂದು ಜನರು ಏಕೆ ಹೇಳುತ್ತಾರೆ? |
42
|
ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ, |
43
|
ನಾನು ನಿನ್ನ ವೈರಿಗಳನ್ನು ನಿನ್ನ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲೇ ಕುಳಿತುಕೊಂಡಿರು.’ ಕೀರ್ತನೆ 110:1 |
44
|
ದಾವೀದನು ಕ್ರಿಸ್ತನನ್ನು ಪ್ರಭು؆ವೆಂದು ಕರೆದ ಮೇಲೆ ಅತನು ಅವನಿಗೆ ಮಗನಾಗಲು ಹೇಗೆ ಸಾಧ್ಯ?” ಎಂದು ಹೇಳಿದನು. |
45
|
ಜನರೆಲ್ಲರೂ ಯೇಸುವಿನ ಮಾತನ್ನು ಆಲಿಸಿದರು. ಯೇಸು ತನ್ನ ಶಿಷ್ಯರಿಗೆ, |
46
|
”ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ. |
47
|
ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು. |
Luke 20:1 Kannada Language Bible Words basic statistical display
COMING SOON ...