ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.
ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ.
ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು. (ಮತ್ತಾಯ 26:26-30; ಮಾರ್ಕ 14:22-26; 1 ಕೊರಿಂಥ, 11:23-25)
ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.
ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು. ಯೇಸುವಿಗೆ ಯಾರು ವಿರೋಧಿಗಳಾಗುವರು?
ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!
ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ನಿಮ್ಮ ನಂಬಿಕೆಯನ್ನು ಕಳೆದುಕೊಳ್ಳಬೇಡಿರಿ! (ಮತ್ತಾಯ 26:31-35; ಮಾರ್ಕ 14:27-31; ಯೋಹಾನ 13:36-38)
ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.
ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.
(ಮತ್ತಾಯ 26:47-56; ಮಾರ್ಕ 14:43-50; ಯೋಹಾನ 18:3-11) ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.
ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.
ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?
ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು. (ಮತ್ತಾಯ 26:57-58, 69-75; ಮಾರ್ಕ 14:53-54, 66-72; ಯೋಹಾನ 18:12-18, 25-27)
ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.
ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.
ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.
(ಮತ್ತಾಯ 26:67-68; ಮಾರ್ಕ 14:65) (63-64) ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.
(ಮತ್ತಾಯ 26:59-66; ಮಾರ್ಕ 14:55-64; ಯೋಹಾನ 18:19-24) ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,