(ಮತ್ತಾಯ 28:1-10; ಮಾರ್ಕ 16:1-8; ಯೋಹಾನ 20:1-10) ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!
ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.
ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.
ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.
ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.
ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.
ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.
ಆ ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೊಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಆ ಜನರು,
ಆಗ ಆ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು. (ಮತ್ತಾಯ 28:16-20; ಮಾರ್ಕ 16:14-18; ಯೋಹಾನ 20:19-23; ಅಪೊ. ಕಾರ್ಯ. 1:6-8)
ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.
ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
(47-48) ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.
ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು. (ಮಾರ್ಕ 16:19-20; ಅಪೊ. ಕಾರ್ಯ. 1:9-11)