ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. [*ಮಹಾಯಾಜಕ ಪ್ರಾಮುಖ್ಯರಾದ ಯೆಹೂದ್ಯಯಾಜಕರು.] ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.
ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು.
ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.
ಸುಂಕವಸೂಲಿಗಾರರು [†ಸುಂಕವಸೂಲಿಗಾರರು ತೆರಿಗೆ ವಸೂಲಿಮಾಡುವುದಕ್ಕೆ ರೋಮನ್ನರಿಂದ ಸಂಬಳಕ್ಕೆ ನೇಮಿಸಲ್ಪಟ್ಟ ಯೆಹೂದ್ಯರು. ಅವರು ಆಗಾಗ್ಗೆ ಮೋಸಮಾಡುತ್ತಿದ್ದರು. ಆದ್ದರಿಂದ ಯೆಹೂದ್ಯರು ಅವರನ್ನು ದ್ವೇಷಿಸುತ್ತಿದ್ದರು.] ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.
ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.
ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ [‡ಶುದ್ಧಮಾಡುವುದಕ್ಕೆ “ಯೇಸು ಒಳ್ಳೆಯವರನ್ನು ಕೆಟ್ಟವರಿಂದ ಬೇರ್ಪಡಿಸುವನು” ಎಂಬುದು ಯೋಹಾನನ ಅರ್ಥವಾಗಿತ್ತು.] ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.