(ಮತ್ತಾಯ 13:53-58; ಮಾರ್ಕ 6:1-6) ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.
“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ
ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’ ” ಎಂದು ಹೇಳಬೇಕೆಂದಿದ್ದೀರಿ.
“ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.
“ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.
“ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.
ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.
(ಮತ್ತಾಯ 8:14-17; ಮಾರ್ಕ 1:29-34) ಯೇಸು ಸಭಾಮಂದಿರದಿಂದ ಹೊರಟು ಸೀಮೋನನ [*ಸೀಮೋನ ಸೀಮೋನನ ಇನ್ನೊಂದು ಹೆಸರು ಪೇತ್ರ.] ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.
ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.
ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.