1
|
ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು. |
2
|
ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು. |
3
|
ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ. |
4
|
ನೀವು ಒಂದು ಮನೆಯಲ್ಲಿ ಇಳಿದುಕೊಂಡಾಗ, ಆ ಊರನ್ನು ಬಿಟ್ಟುಹೋಗುವ ಸಮಯದವರೆಗೂ ಅಲ್ಲೇ ತಂಗಿರಿ. |
5
|
ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.” |
6
|
ಆದ್ದರಿಂದ ಅಪೊಸ್ತಲರು ಹೊರಟು ಊರೂರುಗಳಿಗೆ ಹೋಗಿ, ಎಲ್ಲೆಲ್ಲೂ ಸುವಾರ್ತೆಯನ್ನು ಸಾರಿದರು ಮತ್ತು ರೋಗಿಗಳನ್ನು ವಾಸಿಮಾಡಿದರು. |
7
|
ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು. |
8
|
ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು. |
9
|
[This verse may not be a part of this translation] |
10
|
ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. |
11
|
ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು. |
12
|
ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು. |
13
|
ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು. |
14
|
(ಅಲ್ಲಿ ಸುಮಾರು ಐದು ಸಾವಿರ ಮಂದಿ ಗಂಡಸರು ಇದ್ದರು.) ಯೇಸು ತನ್ನ ಶಿಷ್ಯರಿಗೆ, “ಇವರನ್ನು ಸುಮಾರು ಐವತ್ತೈವತ್ತು ಜನರಂತೆ ಸಾಲಾಗಿ ಕುಳ್ಳಿರಿಸಿರಿ” ಅಂದನು. |
15
|
ಅಂತೆಯೇ ಶಿಷ್ಯರು ಮಾಡಿದರು. ಜನರೆಲ್ಲರೂ ನೆಲದ ಮೇಲೆ ಕುಳಿತುಕೊಂಡರು. |
16
|
ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು. |
17
|
ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು. |
18
|
ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು. |
19
|
ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ಸ್ನಾನಿಕನಾದ ಯೋಹಾನ؆ ಎನ್ನುತ್ತಾರೆ. ಇನ್ನು ಕೆಲವರು, ಎಲೀಯ؆ ಎನ್ನುತ್ತಾರೆ. ಮತ್ತೆ ಕೆಲವರು, ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ؆ ಎನುತ್ತಾರೆ” ಎಂದು ಉತ್ತರಿಸಿದರು. |
20
|
ಆಗ ಯೇಸು, “ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಶಿಷ್ಯರನ್ನು ಕೇಳಿದನು. ಪೇತ್ರನು, “ನೀನು ದೇವರಿಂದ ಬಂದ ಕ್ರಿಸ್ತನು” ಎಂದು ಉತ್ತರಕೊಟ್ಟನು. |
21
|
ಈ ವಿಷಯವನ್ನು ಯಾರಿಗೂ ಹೇಳಬಾರದೆಂದು ಯೇಸು ಅವರನ್ನು ಎಚ್ಚರಿಸಿದನು. |
22
|
ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. |
23
|
ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ದಿನಾಲೂ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. |
24
|
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗೋಸ್ಕರ ತನ್ನ ಜೀವವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು. |
25
|
ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು? |
26
|
”ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಳ್ಳುವುದಾದರೆ, ನಾನು ನನ್ನ ಮಹಿಮೆಯೊಡನೆ, ತಂದೆಯ ಮಹಿಮೆಯೊಡನೆ ಮತ್ತು ಪರಿಶುದ್ಧ ದೂತರ ಮಹಿಮೆಯೊಡನೆ ಬಂದಾಗ ಅವನ ವಿಷಯದಲ್ಲಿ ನಾಚಿಕೊಳ್ಳುವೆನು. |
27
|
ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು. |
28
|
ಯೇಸು ಈ ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು. |
29
|
ಯೇಸು ಪ್ರಾರ್ಥಿಸುತ್ತಿದ್ದಾಗ, ಆತನ ಮುಖವು ರೂಪಾಂತರವಾಯಿತು. ಆತನ ಬಟ್ಟೆಗಳು ಬೆಳ್ಳಗೆ ಹೊಳೆಯತೊಡಗಿದವು. |
30
|
ಆಗ ಇಬ್ಬರು ಪ್ರವಾದಿಗಳು ಯೇಸುವಿನೊಡನೆ ಮಾತನಾಡುತ್ತಿದ್ದರು. ಅವರು ಮೋಶೆ ಮತ್ತು ಎಲೀಯ. |
31
|
ಇವರಿಬ್ಬರು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದರು. ಜೆರುಸಲೇಮಿನಲ್ಲಿ ಸಂಭವಿಸಲಿಕ್ಕಿದ್ದ ಆತನ ಮರಣದ ಬಗ್ಗೆ ಅವರು ಮಾತಾಡುತ್ತಿದ್ದರು. |
32
|
ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು. |
33
|
ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.) |
34
|
ಪೇತ್ರನು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಮೋಡವು ಬಂದು ಅವರ ಸುತ್ತಲೂ ಆವರಿಸಿತು. ಆಗ ಪೇತ್ರ, ಯಾಕೋಬ ಮತ್ತು ಯೋಹಾನನಿಗೆ ಭಯವಾಯಿತು. |
35
|
ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು. |
36
|
ಆ ವಾಣಿ ಆದಮೇಲೆ ಅವರು ಯೇಸುವನ್ನು ಮಾತ್ರ ಕಂಡರು. ಪೇತ್ರ, ಯಾಕೋಬ, ಯೋಹಾನರು ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಮೌನವಾಗಿದ್ದರು. |
37
|
ಮರುದಿನ, ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಬೆಟ್ಟದಿಂದಿಳಿದು ಬಂದರು. ಜನರ ಬಹು ದೊಡ್ಡ ಗುಂಪೊಂದು ಯೇಸುವನ್ನು ಎದುರುಗೊಂಡಿತು. |
38
|
ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು. |
39
|
ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ. |
40
|
ನನ್ನ ಮಗನನ್ನು ದೆವ್ವದಿಂದ ಬಿಡಿಸಬೇಕೆಂದು ನಿನ್ನ ಶಿಷ್ಯರನ್ನೂ ಬೇಡಿಕೊಂಡೆನು. ಆದರೆ ಅವರಿಂದ ಸಾಧ್ಯವಾಗಲಿಲ್ಲ” ಎಂದು ಯೇಸುವಿಗೆ ಕೂಗಿ ಹೇಳಿದನು. |
41
|
ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು. |
42
|
ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು. |
43
|
ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. (ಮತ್ತಾಯ 17:22-23; ಮಾರ್ಕ 9:30-32) ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ, |
44
|
”ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು. |
45
|
ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು. |
46
|
ತಮ್ಮಲ್ಲಿ ಯಾವನು ಅತ್ಯಂತ ಪ್ರಮುಖನು ಎಂಬುದರ ಬಗ್ಗೆ ಯೇಸುವಿನ ಶಿಷ್ಯರು ವಾದಮಾಡತೊಡಗಿದರು. |
47
|
ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಒಂದು ಚಿಕ್ಕ ಮಗುವನ್ನು ಕರೆದು ತನ್ನ ಬಳಿಯಲ್ಲಿ ನಿಲ್ಲಿಸಿದನು. |
48
|
ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು. |
49
|
ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು. |
50
|
ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿ. ಏಕೆಂದರೆ, ನಿಮಗೆ ವಿರೋಧವಾಗಿಲ್ಲದವನು ನಿಮ್ಮವನೇ” ಎಂದನು. |
51
|
ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು. |
52
|
ಯೇಸು ಕೆಲವರನ್ನು ತನ್ನ ಮುಂದಾಗಿ ಕಳುಹಿಸಿದನು. ಯೇಸುವಿಗಾಗಿ ಪ್ರತಿಯೊಂದನ್ನು ಸಿದ್ಧಪಡಿಸಲು ಅವರು ಸಮಾರ್ಯ ಪಟ್ಟಣಕ್ಕೆ ಹೋದರು. |
53
|
ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ. |
54
|
ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು. |
55
|
ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು. |
56
|
ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು. |
57
|
ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು. |
58
|
ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು. |
59
|
ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು. |
60
|
ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು. |
61
|
ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು. |
62
|
ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು. |
Luke 9:1 Kannada Language Bible Words basic statistical display
COMING SOON ...